ಮಗುವನ್ನು ಕೊಂದು ಸೂಟ್​ಕೇಸ್​​ನಲ್ಲಿ ಸಾಗಿಸುತ್ತಿದ್ದ ಸ್ಟಾರ್ಟ್​​ ಅಪ್ ಕಂಪೆನಿಯ ಸಿಇಓ ಬಂಧನ

Date:

Advertisements

ತನ್ನದೇ ಮಗುವನ್ನೇ ಹತ್ಯೆ ಮಾಡಿ ಸೂಟ್​ಕೇಸ್​​ನಲ್ಲಿ ಸಾಗಿಸಿದ ಆರೋಪದ ಮೇಲೆ ಸ್ಟಾರ್ಟ್​​ ಅಪ್ ಕಂಪನಿಯಾಗಿರುವ ಮೈಂಡ್​ಫುಲ್​ ಎಐ ಲ್ಯಾಪ್​​ ಫೌಂಡರ್​​ ಮತ್ತು ಸಿಇಓ ಸುಚನ ಸೇಠ್​​ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸುಚನ ಸೇಠ್ ಗೋವಾದ ಹೋಟೆಲ್​ವೊಂದರಲ್ಲಿ ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ತಂಗಿದ್ದರು. ಬಳಿಕ ಸೂಟ್​ಕೇಸ್​ ಹಿಡಿದುಕೊಂಡು ಬೆಂಗಳೂರಿಗೆ ಹೊರಟಿದ್ದಾರೆ. ಟ್ಯಾಕ್ಸಿ ಹಿಡಿದು ಬೆಂಗಳೂರಿಗೆ ಹೊರಟ ಸಂದರ್ಭದಲ್ಲಿ ಹೋಟೆಲ್​​ ಸಿಬ್ಬಂದಿ ನಿಮ್ಮ ಜೊತೆಗಿದ್ದ ಮಗು ಎಲ್ಲಿ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸುಚನ ಸೇಠ್, ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಸುಳ್ಳು ಹೇಳಿ ಅಲ್ಲಿಂದ ನಿರ್ಗಮಿಸಿದ್ದರು. ಬಳಿಕ ಟ್ಯಾಕ್ಸಿ ಏರಿ ಬೆಂಗಳೂರಿನತ್ತ ಬಂದಿದ್ದಾರೆ.

suchana with son

ರಕ್ತದ ಕಲೆ ನೀಡಿತು ಸುಳಿವು!

Advertisements

ಹೋಟೆಲ್​ ಸಿಬ್ಬಂದಿಗೆ ಸುಚನ ಸೇಠ್ ಮೇಲೆ ಅನುಮಾನ ಬಂದಿದ್ದು, ಬಳಿಕ ರೂಂ ಸ್ವಚ್ಛಗೊಳಿಸುವ ಸಮಯದಲ್ಲಿ ರಕ್ತದ ಕಲೆಗಳು ಕಾಣಸಿಕ್ಕಿವೆ. ತಕ್ಷಣವೇ ಹೋಟೆಲ್​ನವರು ಗೋವಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗೋವಾ ಪೊಲೀಸರು ಈ ವಿಚಾರ ಗೊತ್ತಾಗುತ್ತಿದ್ದಂತೆ ಕಾರಿನ ಚಾಲಕನನ್ನು ಸಂಪರ್ಕಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪೊಲೀಸ್​ ಠಾಣೆ ಬಳಿ ಕಾರು ನಿಲ್ಲಿಸುವಂತೆ ಹಾಗೂ ಮಹಿಳೆಗೆ ಅನುಮಾನ ಬಾರದಂತೆ ನಿಲ್ಲಿಸಬೇಕು ಎಂದು ಕಾರಿನ ಚಾಲಕನಿಗೆ ಸೂಚನೆ ನೀಡಿದ್ದಾರೆ. ಅದರಂತೆಯೇ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಐಮಂಗಲ ಠಾಣೆ ಬಳಿ ಕಾರು ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದಾನೆ. ಈ ನಡುವೆ ಗೋವಾ ಪೊಲೀಸರು, ಚಿತ್ರದುರ್ಗದ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.

ಬಳಿಕ ಚಿತ್ರದುರ್ಗದ ಪೊಲೀಸರು ಕಾರಿನ ಸೂಟ್‌ಕೇಸ್ ಪರಿಶೀಲಿಸಿದಾಗ ಮಗುವಿನ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಸುಚನ ಸೇಠ್ ​​ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮಗುವಿನ ಕೊಲೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಘಟನೆಯ ಸಂಬಂಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X