ಒಂದು ದೇಶ ಯಾರ ಮೇಲೂ ಅವಲಂಬನೆಯಾಗದೆ, ಸ್ವಾವಲಂಬಿಯಾಗಿ ನಿಲ್ಲಬೇಕು. ಆಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ವಿಲಾಸ ಕದ್ರೋಳ್ಳರ್ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ, ʼಭಾರತದ ಸುಸ್ಥಿರ ಅಭಿವೃದ್ಧಿಗಾಗಿ ಆತ್ಮ ನಿರ್ಭರ ಭಾರತʼ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಎನ್‌ಇಪಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ರಾಜಕುಮಾರ ಮಾಲಿಪಾಟೀಲ್ ಮಾತನಾಡಿ, ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರ ಜ್ಞಾನವನ್ನು ಹೆಚ್ಚಿಸಲು ವಿಶೇಷ ಉಪನ್ಯಾಸಗಳು ಅತ್ಯಂತ ಅವಶ್ಯಕವಿದ್ದು ಇಂತಹ ಕಾರ್ಯಕ್ರಮಗಳು ಪದೇ ಪದೇ ಜರುಗಲಿ ಎಂದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಪಕ ಡಾ. ಹುಚ್ಚೇಗೌಡಾ, ವಿವಿಧ ವಿಭಾಗದ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸ್ನಾತಕ ವಿದ್ಯಾರ್ಥಿನಿ ಶಾಂತಾ ಹಾಗೂ ಸಂಗಡಿಗರು ಸ್ವಾಗತ ಗೀತೆಯನ್ನು ಹಾಡಿದರು. ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಆರ್.ಗಂಗಾಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ನಾತಕ ವಿದ್ಯಾರ್ಥಿನಿಯಾದ ಸೋನಿಯಾ ಅಲೆಗಾವಿ ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಶ್ವೇತಾ. ಲ. ಬಡಿಗೇರ ಕಾರ್ಯಕ್ರಮ ನಿರೂಪಿಸಿದರು.