ಧಾರವಾಡ | ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ: ಎಂ ಬಿ ದಳಪತಿ

Date:

Advertisements

ಮುಂದಿನ ಪೀಳಿಗೆಗಾಗಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸೋಣ. ವೇಷ, ಭಾಷೆ, ಸಂಸ್ಕೃತಿ ಬೇರೆಯಾದರು ನಾವೆಲ್ಲರೂ ಭಾರತ ಮಾತೆಯ ಮಕ್ಕಳು. ಎನ್‌ಎಸ್‌ಎಸ್ ಗೀತೆ ರಚಿಸಿದ ಡಾ. ಎಂ ಬಿ ದಿಲ್ ಶಾದ್ ಅವರ ವ್ಯಕ್ತಿತ್ವವನ್ನು ಪ್ರತಿಯೊಬ್ಬರೂ ರೂಪಿಸಿಕೊಳ್ಳಬೇಕು ಎಂದು ಕವಿವಿ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಕಾರ್ಯಕ್ರಮ ಸಂಯೋಜಕ ಡಾ ಎಂ ಬಿ ದಳಪತಿ ಅವರು ಹೇಳಿದರು.

ಧಾರವಾಡ ನಗರದ ಅಂಜುಮನ್ ಕಾಲೇಜಿನ ಸಭಾಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಅಂಜುಮನ್ ಕಾಲೇಜ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಂಸ್ಕೃತಿಕ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಬೇರೆ ಬೇರೆ ಭಾಷೆ, ಸಂಸ್ಕೃತಿ ಇದ್ದರೂ ಕೂಡ ನಮ್ಮ ದೇಶ ಏಕತೆ ಮತ್ತು ಭಾವೈಕ್ಯತಗೆ ಹೆಸರಾಗಿದೆ. ಯುವ ಜನಾಂಗದಲ್ಲಿ ಏಕತೆ ಮತ್ತು ರಾಷ್ಟ್ರೀಯ ಭಾವೈಕ್ಯತ ಮೂಡಲಿ, ಒಂದು ರಾಷ್ಟ್ರದ ಭೌಗೋಳಿಕ ಪರಿಸರದಲ್ಲಿ ಜನರು ವಾಸಿಸುವ ಪ್ರದೇಶವನ್ನು ರಾಷ್ಟ್ರ ಎನ್ನುತ್ತೇವೆ. ವಿವಿಧತೆಯಲ್ಲಿ ಏಕತೆಯಿಂದ ಇರುವುದನ್ನು ಭಾವೈಕ್ಯತೆ ಎನ್ನುವರು” ಎಂದರು.

Advertisements

“ಭಾಷೆ, ಪ್ರದೇಶ, ಉಡುಗೆ ತೊಡುಗೆ, ಕಲೆ, ಸಾಹಿತ್ಯ, ವಾಸ್ತುಶಿಲ್ಪ, ನೀತಿ ನಿಯಮಗಳು, ನಡೆ ನುಡಿಯಿಂದ ಭಿನ್ನವಿದ್ದರು ನಾವೆಲ್ಲರೂ ಒಂದೇ. ವಸು ದೈವ ಕುಟುಂಬಕಂ ಎಂಬುದು ನಮ್ಮ ಸಂಸ್ಕೃತಿಯ ಮೂಲ ಮಾತ್ರವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಕೊಪ್ಪಳ | ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ ಭಾವೈಕ್ಯತೆ ಸಾರಿದ ಮುಸ್ಲಿಂ ಕುಟುಂಬ

ಅಂಜುಮನ್ ಸಂಸ್ಥೆಯ ನಿರ್ದೇಶಕ ಇಕ್ಬಾಲ್ ಕೆ ಜಮಾಧಾರ ಕಾರ್ಯಕ್ರಮದ ಅಧ್ಯಕ್ಷೆತೆ ವಹಿಸಿದ್ದರು. ಪತ್ರಿಕೋದ್ಯಮದ ಮುಖ್ಯಸ್ಥ ಡಾ ಎಸ್ ಎಸ್ ಅದೋನಿ ಐಕ್ಯೂಎಸಿ ಡಾ ಎನ್ ಬಿ ನಾಲತವಾಡ ಡಾ.ನಾಗರಾಜ ಗುದಾಗನವರ, ಡಾ.ಜಯನಂದ ಹಟ್ಟಿ, ಆಸಿಫ್ ತೋರಗಲ್, ಎಸ್ ಎಂ ಕೋಟಬಾಗಿ, ಗುಜರಾತ್, ಗೋವಾ, ಮಧ್ಯಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯದ ವಿವಿಧ ವಿಶ್ವವಿದ್ಯಾಲಯದ 150 ಮಂದಿ ಎನ್‌ಎಸ್‌ಎಸ್ ಸ್ವಯಂ ಸೇವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X