ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲುವುದನ್ನು ಕಾಂಗ್ರೆಸ್ ನಿರೀಕ್ಷಿಸುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು. “2019ರ ಲೋಕಸಭಾ ಚುನಾವಣೆಯಲ್ಲಿ ಇಡೀ ದಕ್ಷಿಣ ಭಾರತದಲ್ಲಿಯೇ ನನಗೆ ಹೆಚ್ಚು ಮತಗಳು ಸಿಕ್ಕಿವೆ. ಈ ಬಾರಿ ಆ ದಾಖಲೆ ಮೀರುವ ಪ್ರಯತ್ನ ಮಾಡುತ್ತೇವೆ. ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನು ಕಾಂಗ್ರೆಸ್ ನಿರೀಕ್ಷಿಸುತ್ತಿದೆ” ಎಂದಿದ್ದಾರೆ.
“ಫೆಬ್ರುವರಿ ಮೊದಲ ವಾರದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತೇನೆ. ಕಾರ್ಯಕರ್ತರನ್ನು ಸಂಘಟಿಸುತ್ತೇನೆ.” ಎಂದು ಅವರು ಹೇಳಿದ್ದಾರೆ.
ನಿಮ್ಮಂಥ ದೇವಮಾನವರು ಇನ್ನಷ್ಟು ಜನ ಬಿಜೆಪಿಯಲ್ಲಿ ಹುಟ್ಟಿದರೆ ರಾಜ್ನಯದ ಜನರು ಪಕ್ಷದ ಅಂತಿಮ ಸಂಸ್ಕಾರದ ಸಿದ್ಧತೆ ಈಗಿನಿಂದಲೇ ಪ್ರಾರಂಭಿಸುವರು