ಗದಗ | ಹೊಂಬಳದ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ

Date:

Advertisements

ಗದಗ‌ ಜಿಲ್ಲೆ ಹೊಂಬಳದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡವನ್ನು ಉತ್ತಮವಾಗಿ ನಿರ್ಮಿಸಲು ಭೂದಾನ ಮಾಡಿದ ಮೈಲಾರ ಕುಟುಂಬಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಸಿ ಸಿ ಪಾಟಿಲ್‌ ಹೇಳಿದರು.

ಸರ್ಕಾರಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಪಾರ್ವತಮ್ಮ ಮತ್ತು ಶಂಕರಪ್ಪ ಮೈಲಾರ ಸ್ಮಾರಕ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹೊಂಬಳದಲ್ಲಿ ನಿರ್ಮಿಸಿರುವ ಐಟಿಐ ಕಾಲೇಜು ಕಟ್ಟಡವನ್ನು ಬುಧವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಬಾಡಿಗೆ ಕಟ್ಟಡದಲ್ಲಿ ತರಬೇತಿ ಸಂಸ್ಥೆ ಹಲವಾರು ವರ್ಷಗಳಿಂದ ನಡೆಯುತ್ತಿತ್ತು. ಇದನ್ನು ಅರಿತ ಮೈಲಾರ ಕುಟುಂಬಸ್ಥರು ತಮ್ಮ ಸ್ವಂತ ಎರಡು ಎಕರೆ ಜಮೀನನ್ನು ಕಾಲೇಜು ನಿರ್ಮಾಣಕ್ಕೆ ಭೂದಾನ ಮಾಡುವ ಮೂಲಕ ಈ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿದ್ದಾರೆ. ಅವರಿಗೆ ಭಗವಂತ ಇನ್ನೂ ಹೆಚ್ಚಿನ ಆರ್ಥಿಕ ಶಕ್ತಿ ದಯಪಾಲಿಸಲಿ” ಎಂದು ಹೇಳಿದರು.

Advertisements

“ಲೋಕೊಪಯೋಗಿ ಸಚಿವನಾಗಿದ್ದ ಸಮಯದಲ್ಲಿ ಈ ಕಾಲೇಜು ಕಟ್ಟಡ ನಿರ್ಮಾಣಕ್ಕೆ ₹2.19 ಕೋಟಿ ಅನುದಾನ ಒದಗಿಸುವ ಮೂಲಕ ಸುಂದರ ಕಟ್ಟಡ ನಿರ್ಮಾಣಕ್ಕೆ 2019ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇಂದು ಉದ್ಘಾಟನೆ ಆಗಿರುವುದು ಸಂತಸ ತಂದಿದೆ” ಎಂದರು.

“ಈ ತರಬೇತಿ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉತ್ತಮವಾಗಿಸಿಕೊಳ್ಳಬೇಕು. ಕಾಲೇಜು ಪ್ರಾಚಾರ್ಯರು ಕೆಲವು ಬೇಡಿಕೆಗಳನ್ನು ಇಟ್ಟಿದ್ದು, ಇನ್ನೆರೆಡು ಹೊಸ ಕೋರ್ಸ್‌ಗಳನ್ನು ಆರಂಭಿಸಲು ನಾನು ಮತ್ತು ಶಾಸಕ ಎಸ್ ವಿ ಸಂಕನೂರ ಒಗ್ಗೂಡಿ ಪ್ರಯತ್ನಿಸಲಾಗುವುದು” ಎಂದು ತಿಳಿಸಿದರು.

“ಕಾಲೇಜು ಕಟ್ಟಡದ ಸುತ್ತಲೂ ಕಾಂಪೌಂಡ್ ನಿರ್ಮಿಸಲು ಉದ್ಯೋಗ ಖಾತ್ರಿಯಡಿ ಕಾಮಗಾರಿ ಹಂತ ಹಂತವಾಗಿ ನಿರ್ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದ್ದು, ಮುಖ್ಯ ರಸ್ತೆಯಿಂದ ಕಾಲೇಜಿಗೆ ಬರಲು ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡಲಾಗುವುದು” ಎಂದು ಭರವಸೆ ನೀಡಿದರು.

“ಕಾಲೇಜಿನ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸುತ್ತೇವೆ. ಆದರೆ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ನೌಕರ ಅಥವಾ ಉದ್ಯಮ ಆರಂಭಿಸುವ ಮೂಲಕ ಈ ಕಾಲೇಜಿಗೆ ಹೆಸರು ತರಬೇಕು” ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ ಮಾತನಾಡಿ, “ವಿಜ್ಞಾನ ಮತ್ತು ತಂತ್ರಜ್ಞಾನ ದೇಶದ ಪ್ರಗತಿಯಲ್ಲಿ ತಮ್ಮದೇ ಆದ ಪ್ರಮುಖ ಸ್ಥಾನವನ್ನು ಹೊಂದಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿದ್ದ ಐಐಟಿ ಕಾಲೇಜುಗಳ ಸಂಖ್ಯೆಯನ್ನು 16 ರಿಂದ 23ಕ್ಕೆ ವಿಸ್ತರಿಸಿದ್ದಾರೆ. ಹಾಗೂ ತ್ರಿಬಲ್ ಐಟಿ 9 ರಿಂದ 25ಕ್ಕೆ ಹೆಚ್ಚಿಸುವ ಮೂಲಕ ವಿಜ್ಞಾನ ತಂತ್ರಜ್ಞಾನಕ್ಕೆ ಒತ್ತು ನೀಡಿದ್ದಾರೆ” ಎಂದರು.

ಧಾರವಾಡದಲ್ಲಿ ಇತ್ತೀಚೆಗೆ ನರೇಂದ್ರ ಮೋದಿಯವರು ಐಐಟಿ ಕೇಂದ್ರವನ್ನು ಉದ್ಘಾಟಿಸಿದರು. ಹುಬ್ಬಳ್ಳಿ-ಧಾರವಾಡ ನಡುವೆ ತ್ರಿಬಲ್ ಐಟಿ ಕೇಂದ್ರಕ್ಕೆ ರಾಷ್ಟ್ರಪತಿಯವರು ಚಾಲನೆ ನೀಡಿದ್ದಾರೆ. ದೇಶದ ಯುವಕರಿಗೆ ಕೌಶಲ್ಯ ವೃದ್ಧಿಸುವ ಉದ್ದೇಶದಿಂದ 2019ರಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸುವ ಮೂಲಕ ಯುವಜನರ ಕೌಶಲ್ಯಾಭಿವೃದ್ಧಿಗೆ ಮುಂದಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ರಾಜ್ಯ ಮಟ್ಟದ ಪುಸ್ತಕ ಆಯ್ಕೆಗೆ ಪ್ರಥಮ ಮುದ್ರಿತ ಪುಸ್ತಕಗಳ ಆಹ್ವಾನ

ಇದೇ ಸಂದರ್ಭದಲ್ಲಿ ಭೂದಾನಿಗಳಾದ ಶೇಖರಪ್ಪ ಶಿವಪ್ಪ ಮೈಲಾರ ಕುಟುಂಬ ವರ್ಗದವರನ್ನು ಶಾಸಕ ಸಿ ಸಿ ಪಾಟೀಲ ಅವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭೀಮಾಂಬಿಕಾ ಹಾಲನವರ, ಉಪಾಧ್ಯಕ್ಷೆ ನೀಲಮ್ಮ ಬಾಲಮ್ಮನವರ ಸೇರಿದಂತೆ ಗಣ್ಯರುಗಳಾದ ಯಲ್ಲಪ್ಪ ಮೈಲಾರ, ವಸಂತಪ್ಪ ಗಣಾಚ, ಮಲ್ಲಪ್ಪ ಹುಣಸಿಕಟ್ಟಿ, ಅಂದಾನಪ್ಪ ಯಕ್ಲಾಸಪುರ, ರಾಜಣ್ಣ, ನಿಂಗಪ್ಪ ಮಣ್ಣೂರ, ಸರ್ಕಾರಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಂಟಿ ನಿರ್ದೇಶಕ ಬಸವಪ್ರಭು ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ಕಾಲೇಜು ವಿ‌ದ್ಯಾರ್ಥಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X