ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

Advertisements

ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅವರು ಮಾತನಾಡಿದರು.

“ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ” ಎಂದರು.

Advertisements

ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು

“ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ತೊಂದರೆಯಾಗಿಲ್ಲ

“ಗ್ಯಾರಂಟಿ ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿಲ್ಲ” ಎಂದು ಹೇಳಿದರು.

“ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಷಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2,000 ರೂ ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಪ್ರಾರಂಭಿಸಲಾಗಿದೆ” ಎಂದರು.

“ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇವರಿಗೆ ಮರ್ಯಾದೆ ಇದೆಯೇ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15 ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1 ಲಕ್ಷ 66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ” ಎಂದು ಪ್ರಶ್ನಿಸಿದರು.

“2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು. 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ” ಎಂದರು.

ಪಟ್ಟಿ ಕಳಿಸಿ

“ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳಿಸಿಕೊಟ್ಟು ಇದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X