ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್‌

Date:

Advertisements
  • ಪುಣೆಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸತ್ಯಕಿ ಸಾವರ್ಕರ್
  • ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದ ಸಾವರ್ಕರ್‌ ವಿಚಾರ ಲಂಡನ್‌ನಲ್ಲಿ ಪ್ರಸ್ತಾಪಿಸಿದ್ದ ರಾಹುಲ್

ವಿನಾಯಕ ದಾಮೋದರ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್, ರಾಹುಲ್ ಗಾಂಧಿ ವಿರುದ್ಧ ಪುಣೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

ರಾಹುಲ್ ಗಾಂಧಿ ತಮ್ಮ ಲಂಡನ್ ಭಾಷಣದಲ್ಲಿ ಸಾವರ್ಕರ್ ವಿರುದ್ಧ ತಪ್ಪಾಗಿ ಆರೋಪಿಸಿದ್ದಕ್ಕೆ ಈ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವರ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಹಾಗೂ 500ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

“ನಾನು ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ನ್ಯಾಯಾಲಯದ ಅಧಿಕಾರಿ ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ. ಇನ್ನೂ ಪ್ರಕರಣ ಸಂಖ್ಯೆ ದೊರಕಿಲ್ಲ” ಎಂದು ಸಾವರ್ಕರ್ ಹೇಳಿದ್ದಾರೆ. 

Advertisements

40 ವರ್ಷ ವಯಸ್ಸಿನ ಸತ್ಯಕಿ ಅವರು ವಿ ಡಿ ಸಾವರ್ಕರ್‌ ಅವರ ಸಹೋದರ, ನಾರಾಯಣ ದಾಮೋದರ್‌ ಸಾವರ್ಕರ್‌ ಅವರ ಮೊಮ್ಮಗ.

ಲಂಡನ್‌ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಸಾವರ್ಕರ್ ವಿಷಯವನ್ನು ಪ್ರಸ್ತಾಪಿಸಿದ್ದರು. “ತಾವು ಹಾಗೂ ತಮ್ಮ ಐದಾರು ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದೆವು. ಆಗ ತಮಗೆ ಸಂತೋಷವಾಗಿತ್ತು” ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದಿರುವುದಾಗಿ ರಾಹುಲ್ ಗಾಂಧಿ ಸಭೆಗೆ ತಿಳಿಸಿದ್ದರು.

ಈ ಘಟನೆಯನ್ನು ಉಲ್ಲೇಖಿಸಿದ್ದ ರಾಹುಲ್ ಗಾಂಧಿ, ಇದು ಹೇಡಿತನವಲ್ಲವೇ ಎಂದು ಪ್ರಶ್ನಿಸಿದ್ದರು. ರಾಹುಲ್ ಗಾಂಧಿ ಉಲ್ಲೇಖಿಸಿದ್ದ ಈ ಪ್ರಕರಣ ಕಲ್ಪಿತವಾದದ್ದು, ಸಾವರ್ಕರ್ ಜೀವನದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಸಾವರ್ಕರ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟವರು. ಮುಸ್ಲಿಮರಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳುವಂತೆ ಸಾವರ್ಕರ್ ಸಲಹೆ ನೀಡುತ್ತಿದ್ದರು ಎಂದು ಸತ್ಯಕಿ ಹೇಳಿದ್ದಾರೆ. 

ಮೋದಿ ಉಪನಾಮದ ಮಾನನಷ್ಟ ಪ್ರಕರಣ

ಪ್ರಧಾನಿ ಮೋದಿ ಉಪನಾಮದ ಕುರಿತ ಹೇಳಿಕೆ ಸಂಬಂಧ 2 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಏಪ್ರಿಲ್ 3ರಂದು ಶಿಕ್ಷೆ ಆದೇಶ ಪ್ರಶ್ನಿಸಿ ಸೂರತ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಿದ್ದಾರೆ.

ಮಾನಹಾನಿ ಮೊಕದ್ದಮೆಯಲ್ಲಿ ಮಾರ್ಚ್ 23ರಂದು ಸೂರತ್‌ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಲ್ಲದೆ ನ್ಯಾಯಾಲಯ ಪ್ರಕರಣದಲ್ಲಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಅವರಿಗೆ ಜಾಮೀನು ನೀಡಿ 30 ದಿನಗಳವರೆಗೆ ಕಾಲಾವಕಾಶ ಒದಗಿಸಿತು. ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಸಂಸದ ಸ್ಥಾನದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿದ ಕೆಲವು ದಿನಗಳ ನಂತರ, ರಾಹುಲ್ ಗಾಂಧಿ ಅವರು ತಮ್ಮ ಅಧಿಕೃತ ದೆಹಲಿ ಬಂಗಲೆಯನ್ನು ತೆರವು ಮಾಡುವಂತೆ ಲೋಕಸಭೆ ನೋಟಿಸ್ ನೀಡಿದೆ.

2004ರಲ್ಲಿ ಅವರು ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಾಗ ಅವರಿಗೆ ನವದೆಹಲಿಯ ಲುಧಿಯಾನ ಏರಿಯಾದ 12 ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ಸರಕಾರದ ವತಿಯಿಂದ ನೀಡಲಾಗಿತ್ತು. ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾರಣ ಏಪ್ರಿಲ್‌ 22ರೊಳಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕು ಎಂದು ಲೋಕಸಭಾ ವಸತಿ ಸಮಿತಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X