ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೈತನೊಬ್ಬನನ್ನು ಕೊಲೆಗೈದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತುಕಾರಾಮ ರಾಜಗೀರೆ (45) ಕೊಲೆಯಾದ ರೈತ, ಅದೇ ಗ್ರಾಮದ ಜನರು ಸೇರಿ ಹೊಲದಲ್ಲಿ ಕಾಲುದಾರಿಗಾಗಿ ಜಗಳವಾಡಿದರು, ಅಧಿಕಾರಿಗಳು ಸರ್ವೇ ಮಾಡಿ ಹೋದ ಬಳಿಕ ಮತ್ತೆ ಗಲಾಟೆ ಶುರುವಾದ ವೇಳೆ ಮಲ್ಲಿಕಾರ್ಜುನ ಅವರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಆತನ ಮಗನ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮನ್ನಾಏಖೇಳಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗೇ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ.
ರೈತನಿಗೆ ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮೃತ ಮಲ್ಲಿಕಾರ್ಜುನ ಕುಟುಂಬಸ್ಥರು ಮನ್ನಾಏಖೆಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ತಿಗಡಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಯಾವುದೇ ಪುರಾವೆಗಳಿಲ್ಲ ಎಂದ ಎಸ್‌ಪಿ
ಈ ಕುರಿತು ಮನ್ನಾಎಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.