ಬೆಳಗಾವಿ | ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಮಕ್ಕಳು ಅಸ್ವಸ್ಥ, ಮಕ್ಕಳು ಅಪಾಯದಿಂದ ಪಾರು; ಡಿಡಿಪಿಐ ಮೋಹನಕುಮಾರ

Date:

Advertisements

ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ನಡೆದಿದೆ.

ಹಾಲು ಸೇವಿಸಿದಂತ 38 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ವಾಂತಿ, ಬೇಧಿ ಕಾಣಿಸಿಕೊಂಡಿದೆ. ಶಾಲಾ ಮಕ್ಕಳನ್ನು ಕೂಡಲೇ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಬಿಇಒ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಘಟನೆಯ ಮಾಹಿತಿ ಪಡೆದಿದ್ದಾರೆ. ಬಿಸಿ ಹಾಲಿನಲ್ಲಿ ಹಲ್ಲಿ ಬಿದ್ದಿದ್ದೇ ಘಟನೆಗೆ ಕಾರಣ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಪ್ರಭಾವತಿ ಪಾಟೀಲ ತಿಳಿಸಿದ್ದಾರೆ.

ಈ ಶಾಲೆಯಲ್ಲಿ ಕನ್ನಡ ಹಾಗೂ ಉರ್ದು ಮಾಧ್ಯಮ ಸೇರಿ ಒಟ್ಟು 94 ವಿದ್ಯಾರ್ಥಿಗಳಿಗೆ ಹಾಲು ನೀಡಲಾಗಿತ್ತು. ಬಳಿಕ ಹಲ್ಲಿ ಬಿದ್ದಿದ್ದು ಗೊತ್ತಾಯಿತು. ಕೆಲವು ನಿಮಿಷಗಳ ಬಳಿಕ 10 ಮಕ್ಕಳಿಗೆ ವಾಂತಿ ಶುರುವಾಯಿತು. ಅವರಿಗೆ ನೀರು ಕುಡಿಸಿ ಸಂತೈಸಿ ಪಾಲಕರನ್ನು ಕರೆಸಲಾಯಿತು. ಅಷ್ಟರೊಳಗೆ ಉಳಿದ 28 ಮಕ್ಕಳಿಗೂ ವಾಂತಿಯ ಲಕ್ಷಣಗಳು ಶುರುವಾದವು. ಇದರಿಂದ ಗಾಬರಿಗೊಂಡ ಪಾಲಕರು ಶಾಲೆಗಳತ್ತ ಧಾವಿಸಿದರು. ಶಿಕ್ಷಕರು ಹಾಗೂ ಪಾಲಕರು ಸೇರಿ ಎರಡು ಆಂಬುಲೆನ್ಸ್‌ ಹಾಗೂ ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಹುಕ್ಕೇರಿ ಹಾಗೂ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿದರು.

Advertisements

ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ, ವಿದ್ಯಾರ್ಥಿಗಳಿಗೆ ಕುಡಿಯಲು ನೀಡಿದ ಹಾಲಿನಲ್ಲಿ ಹಲ್ಲಿ ಬಿದ್ದಿದ್ದು ಖಚಿತವಾಗಿದೆ. ವಾಂತಿ ಭೇದಿ ಕಾಣಿಸಿಕೊಂಡ ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾರಿಗೂ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹಲ್ಲಿ ಹೇಗೆ, ಯಾವಾಗ ಬಿದ್ದಿತು ಎಂಬ ಬಗ್ಗೆ ತನಿಖೆ ನಡೆಸಿ ಕ್ರಮ ವಹಿಸಲಾಗುವುದು ಎಂದು ಮಾದ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X