ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಲೋಪ ಎಸಗಿದ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪೂರ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನನ್ನು ಜಿಲ್ಲಾ ಪಂಚಾಯಿತಿ ಸಿಇಒ ಅಮಾನತು ಮಾಡಿ ಆದೇಶಿಸಿದ್ದಾರೆ.
ಅನಪೂರ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಹನುಮೇಗೌಡ ಅಮಾನತುಗೊಂಡವರು.
ಶಿಕ್ಷಕ ಹಣಮೇಗೌಡ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಳಗೊಂಡ ತನಿಖಾ ತಂಡ ರಚಿಸಲಾಗಿತ್ತು. ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹೇಳಿಕೆ ಪರಿಗಣಿಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತನೆ ತೋರಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿ ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿರುವ ಅಡ್ವಾಣಿ: ವಿಶ್ವ ಹಿಂದೂ ಪರಿಷತ್
ಅಧಿಕಾರಿಗಳು ನೀಡಿದ ತನಿಖಾ ವರದಿ ಆಧಾರದ ಮೇಲೆ ಮುಖ್ಯ ಶಿಕ್ಷಕ ಹನುಮೇಗೌಡನನ್ನು ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರೀಮಾ ಪಂವಾರ್ ಆದೇಶಿಸಿದ್ದಾರೆ.