ಮೈಸೂರು | ರೈಲ್ವೆ ನಿಲ್ದಾಣಕ್ಕೆ ಮತ್ತೊಂದು ಪ್ರವೇಶ ದ್ವಾರ ನಿರ್ಮಾಣ; ನೈಋತ್ಯ ರೈಲ್ವೆ ಚಿಂತನೆ

Date:

Advertisements

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ಚಿಂತನೆ ನಡೆಸಿದೆ.

200 ಕೋಟಿ ರೂ.ಗಳ ಈ ಯೋಜನೆಯನ್ನು ಮುಖ್ಯ ಪ್ರವೇಶದ್ವಾರದಲ್ಲಿನ ದಟ್ಟಣೆಯನ್ನು ನಿವಾರಿಸಲು ಮತ್ತು ಪ್ರಯಾಣಿಕರಿಗೆ ಸೌಲಭ್ಯಗಳನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ. ಮೈಸೂರು ಮತ್ತು ಬೆಂಗಳೂರು ನಡುವೆ ಡಬಲ್ ಟ್ರ್ಯಾಕ್ ಹಾಕಿರುವುದರಿಂದ ಕಳೆದ ದಶಕದಲ್ಲಿ ಪ್ರಯಾಣಿಕರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿರುವುದರಿಂದ ಈ ಯೋಜನೆ ಅತ್ಯಗತ್ಯ.

ನಗರವು ವೇಗವಾಗಿ ಬೆಳೆಯುತ್ತಿರುವುದರಿಂದ, ಮೈಸೂರು ರೈಲ್ವೆ ಜಂಕ್ಷನ್ ಮತ್ತು ಇತರ ಸ್ಥಳಗಳ ನಡುವೆ, ಮುಖ್ಯವಾಗಿ ಬೆಂಗಳೂರು ನಡುವೆ ಜನರ ಚಲನೆ ಪ್ರತಿವರ್ಷ ಹೆಚ್ಚುತ್ತಿದೆ. ಪ್ರಸ್ತುತ ದಿನಗಳಲ್ಲಿ ನಿತ್ಯವೂ ಸುಮಾರು 50,000 ಮಂದಿ ಪ್ರಯಾಣಿಕರು ಮೈಸೂರು ರೈಲ್ವೆ ನಿಲ್ದಾಣದಿಂದ ಇತರ ಸ್ಥಳಗಳಿಗೆ ನಿರ್ಗಮಿಸುತ್ತಿದ್ದಾರೆ. ರಾಮನಗರ, ಬಿಡದಿ ಮತ್ತು ಕೆಂಗೇರಿಯ ಹಲವು ಗಾರ್ಮೆಂಟ್ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಮಹಿಳೆಯರು ಮೈಸೂರಿನಿಂದ ಪ್ರತಿದಿನ ಪ್ರಯಾಣಿಸುತ್ತಾರೆ.

Advertisements

ಈ ಪ್ರಯಾಣಿಕರಿಂದ ಮೈಸೂರು-ಬೆಂಗಳೂರು ರೈಲುಗಳಿಗೆ ಭಾರೀ ಬೇಡಿಕೆ ಇರುವುದರಿಂದ, ಜನದಟ್ಟಣೆಯನ್ನು ಕಡಿಮೆ ಮಾಡಲು ಕೆಆರ್‌ಎಸ್‌ ರಸ್ತೆಯ ವಾಣಿ ವಿಲಾಸ ವಾಟರ್ ವರ್ಕ್ಸ್ (ವಿವಿಡಬ್ಲ್ಯೂಡಬ್ಲ್ಯೂ) ನಿಂದ ಮೈಸೂರು ರೈಲ್ವೆ ನಿಲ್ದಾಣಕ್ಕೆ ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸಲು ವಿಭಾಗ ಯೋಜಿಸುತ್ತಿದೆ.

“ಮೈಸೂರು ರೈಲ್ವೆ ನಿಲ್ದಾಣವು ಎರಡು ಪ್ರವೇಶದ್ವಾರಗಳನ್ನು ಹೊಂದಿದ್ದು, ಮೂರನೇ ಪ್ರವೇಶದ್ವಾರವನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಯಶವಂತಪುರ ರೈಲ್ವೆ ನಿಲ್ದಾಣಗಳ ಮಾದರಿಯಲ್ಲಿ ಯೋಜಿಸಲಾಗಿದೆ. ಶಾಪಿಂಗ್ ಮಾಲ್, ಕೆಫೆಟೇರಿಯಾ ಮತ್ತು ಸೂಪರ್ ಮಾರ್ಟ್ ಸೇರಿದಂತೆ ಇತರ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಹೈಟೆಕ್ ಸೌಲಭ್ಯಗಳೊಂದಿಗೆ ವಿಮಾನ ನಿಲ್ದಾಣದ ಟರ್ಮಿನಲ್ ಮಾದರಿಯಲ್ಲಿ ಹೊಸ ಪ್ರವೇಶದ್ವಾರವನ್ನು ವಿನ್ಯಾಸಗೊಳಿಸಲಾಗುವುದು” ಎಂದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

“ವಿವಿಡಬ್ಲ್ಯೂಡಬ್ಲ್ಯೂ ಕಡೆಯಿಂದ ಮೂರನೇ ಪ್ರವೇಶ ದ್ವಾರ ನಿರ್ಮಿಸಲು ವಿಭಾಗವು ರೈಲ್ವೆ ಸಚಿವಾಲಯಕ್ಕೆ ಪ್ರಸ್ತಾವನೆ ಕಳುಹಿಸಿದೆ. ದೆಹಲಿ ಮೂಲದ ಸಂಸ್ಥೆಯೊಂದು ಮೈಸೂರು ರೈಲ್ವೆ ನಿಲ್ದಾಣದ ಮೂರನೇ ಪ್ರವೇಶ ದ್ವಾರ ನಿರ್ಮಾಣ ಸೇರಿದಂತೆ ಮೇಲ್ದರ್ಜೆಗೇರಿಸಲು ನೀಲನಕ್ಷೆ ಸಿದ್ಧಪಡಿಸಿದೆ” ಎಂದು ಮೈಸೂರು ವಿಭಾಗದ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಹೇಳಿದರು.

“ವಿವಿಡಬ್ಲ್ಯೂಡಬ್ಲ್ಯೂ ಬದಿಯ ಬಳಿ ಶಿಥಿಲಗೊಂಡ ವಸತಿಗೃಹಗಳನ್ನು ನೆಲಸಮಗೊಳಿಸಿ ಮೈಸೂರು ರೈಲ್ವೆ ನಿಲ್ದಾಣ ವಿಸ್ತರಿಸಬೇಕಾಗಿರುವುದರಿಂದ ಇದು ತಾಂತ್ರಿಕ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದೆ. ಮೂರನೇ ಪ್ರವೇಶ ದ್ವಾರ ನಿರ್ಮಾಣ ಸೇರಿದಂತೆ ರೈಲ್ವೆ ನಿಲ್ದಾಣವನ್ನೂ ಮೇಲ್ದರ್ಜೆಗೇರಿಸುವುದು ಇನ್ನೂ ಅಂತಿಮಗೊಂಡಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೌಹಾರ್ದತೆ ಸಾರುವ ಸುಗ್ಗಿ ಹಬ್ಬ ‘ಎಳ್ಳ ಅಮಾವಾಸ್ಯೆ’

ಸಿಎಫ್‌ಟಿಆರ್‌ಐ ಎದುರು ಎರಡನೇ ಪ್ರವೇಶ ದ್ವಾರವನ್ನು ತೆರೆದ ಬಳಿಕವೂ ಪ್ರಯಾಣಿಕರಿಗೆ ಸಹಾಯವಾಗಿದೆ. ಮೈಸೂರು ವಿಭಾಗದ ರೈಲ್ವೆ 750 ಕೋಟಿ ರೂ.ಗಳ ವೆಚ್ಚದಲ್ಲಿ ಪಿಎಂ ಗತಿ ಶಕ್ತಿ ಯೋಜನೆಯಡಿ ರೈಲ್ವೆ ನಿಲ್ದಾಣದ ಪಾರಂಪರಿಕ ರಚನೆಗೆ ಧಕ್ಕೆಯಾಗದಂತೆ ಮರುನಿರ್ಮಾಣ ಮತ್ತು ಪುನರಾಭಿವೃದ್ಧಿ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಮೂರನೇ ಪ್ರವೇಶ ದ್ವಾರವನ್ನು ನಿರ್ಮಿಸುವ ಯೋಜನೆಯು ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣದ ಭಾಗವಾಗಿದೆ. ಮೂರನೇ ಪ್ರವೇಶ ದ್ವಾರವನ್ನು ಎರಡನೇ ಪ್ರವೇಶ ದ್ವಾರದೊಂದಿಗೆ ಸಂಪರ್ಕಿಸಲು ಅಧಿಕಾರಿಗಳು ಯೋಜಿಸಿದ್ದಾರೆ. ಏಕೆಂದರೆ ಇದು ರೈಲ್ವೆ ನಿಲ್ದಾಣದಲ್ಲಿ ಪಾರ್ಕಿಂಗ್ ದಟ್ಟಣೆಯನ್ನು ಕಡಿಮೆ ಮಾಡಲು ನಗರ ರೈಲ್ವೆ ಅಧಿಕಾರಿಗಳಿಗೆ ಸಹಾಯ ಮಾಡುವುದಲ್ಲದೆ ಹೆಚ್ಚಿನ ರೈಲು ಸಂಚಾರಕ್ಳಕೂ ಅನುಕೂಲವಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X