ಲೋಕಸಭೆ ಚುನಾವಣೆ | ಗೆಲ್ಲುವ ಕ್ಷೇತ್ರಗಳಲ್ಲಿ ಸೋತರೆ ಸಚಿವರ ತಲೆದಂಡ: ಗೃಹ ಸಚಿವ ಪರಮೇಶ್ವರ್‌

Date:

Advertisements

ಚುನಾವಣಾ ಜವಾಬ್ದಾರಿಯನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡು ನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಯಾವ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಿದೆಯೋ, ಅಂತಹ ಕಡೆ ಸೋತರೆ, ಸಚಿವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಐದು ಕ್ಲಸ್ಟರ್ ಅನ್ನು ಮಾಡಿದೆ. ಮೊದಲ ಕ್ಲಸ್ಟರ್ಸ್‌ನಲ್ಲಿ ಕರ್ನಾಟಕ, ತೆಲಂಗಾಣ, ಕೇರಳ ರಾಜ್ಯಗಳಿವೆ. ಮೊದಲ ಕ್ಲಸ್ಟರ್‌ನಲ್ಲಿರುವ ಎಲ್ಲ ರಾಜ್ಯಗಳ ನಾಯಕರು ಆಗಮಿಸಿದ್ದರು” ಎಂದರು.

“ಯಾವ ರೀತಿಯಾಗಿ ಬಿಎಲ್ಎಗಳನ್ನು, ಪಂಚಾಯಿತಿ ಹಂತಗಳಲ್ಲಿ ಸಮಿತಿಗಳ ರಚನೆ ಮಾಡುವುದು, ಪ್ರಚಾರ ಯಾವ ರೀತಿ ಕೈಗೊಳ್ಳಬೇಕು ಹಾಗೂ ಅಭ್ಯರ್ಥಿಗಳ ಆಯ್ಕೆ ನಂತರ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಬಹಳ ವ್ಯವಸ್ಥಿತವಾಗಿ ಸೂಚನೆ ಕೊಟ್ಟಿದ್ದಾರೆ” ಎಂದು ಹೇಳಿದರು.

Advertisements

“ಈ ಹಿಂದೆ ಪ್ರತಿ ಕ್ಷೇತ್ರಕ್ಕೆ ಒಬ್ಬರನ್ನು ವೀಕ್ಷಕರನ್ನು ನೇಮಿಸಲಾಗುತ್ತಿತ್ತು. ಈ ಬಾರಿ, ಅದರ ಬದಲಿಗೆ ಸಮನ್ವಯಕಾರರನ್ನು ನೇಮಿಸಲಾಗಿದೆ. ವಾರ್ ರೂಮ್ ಎನ್ನುವುದನ್ನು ಕನೆಕ್ಟ್ ಸೆಂಟರ್ ಎಂದು ಬದಲಿಸಲಾಗಿದೆ. ಇದೆಲ್ಲವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಷ್ಟ್ರೀಯ ಕೋರ್ಡಿನೇಷನ್ ಚೇರ್ಮನ್ ಶಶಿಕಾಂತ್ ಸೆಂಥಿಲ್ ಅವರು ನೋಡಿಕೊಳ್ಳುತ್ತಾರೆ. ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೆರಳ ಸೇರಿದಂತೆ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗ್ಗೆ ಸೂಚನೆ ನೀಡಿದರು. ಕನೆಕ್ಟ್ ಸೆಂಟರ್ ಮೂಲಕ ನೇರವಾಗಿ ಕೋರ್ಡಿನೇಟರ್ ಜೊತೆ ಸಂಪರ್ಕದಲ್ಲಿದ್ದು ಕೆಲಸ ಮಾಡಬೇಕು ಎಂಬುದನ್ನು ತಿಳಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

“ಶಶಿಕಾಂತ್ ಸೆಂಥಿಲ್ ಅವರು ರಾಜ್ಯದ ಎಲ್ಲಾ ಸಚಿವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಚುನಾವಣೆಯಲ್ಲಿ ರಾಜ್ಯದ ಮೇಲೆ ಹೈಕಮಾಂಡ್ ಇಟ್ಟಿರುವ ನಿರೀಕ್ಷೆ ಹಾಗೂ ಸಚಿವರ ಜವಾಬ್ದಾರಿಗಳ ಬಗ್ಗೆ ತಿಳಿಸಿದ್ದಾರೆ” ಎಂದು ಹೇಳಿದರು.

ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದೆ ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮತದಾರರ ಹತ್ತಿರ ಹೋಗಲು ಆಕ್ಷೇಪಣೆ ಇಲ್ಲ. ಯಾರು ಬೇಕಾದರೂ ಮತ ಕೇಳಬಹುದು. ಭಾರತೀಯ ಜನತಾ ಪಾರ್ಟಿಯವರು ಚುನಾವಣೆಯನ್ನು ಎದುರಿಸುವ ವಿಧಾನ ಹಾಗೂ ಚುನಾವಣಾ ವಿಧಾನ ಬೇರೆ ರೀತಿಯಾಗಿರುತ್ತದೆ. ಆದರೆ, ಅಂತಿಮವಾಗಿ ಮತದಾರರು ಮಾಡುವ ತೀರ್ಮಾನವನ್ನು ಯಾರು ಊಹಿಸಲು ಸಾಧ್ಯವಿಲ್ಲ” ಎಂದರು.

ಸುರ್ಜೇವಾಲ ಮತ್ತೆ ರಾಜ್ಯಕ್ಕೆ ಭೇಟಿ

“ದೆಹಲಿಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಚುನಾವಣಾ ತಂತ್ರಗಾರಿಕೆ ಬಗ್ಗೆ ಮಾತ್ರ ಚರ್ಚೆಯಾಗಿದೆ. ಈ ವೇಳೆ, ಆದಷ್ಟು ಬೇಗ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ ಮಾಡಿ ಪಟ್ಟಿ ಬಿಡುಗಡೆ ಮಾಡುವಂತೆ ತಿಳಿಸಿದ್ದೇವೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಪ್ರದೇಶ ಚುನಾವಣಾ ಸಮಿತಿ ಸಭೆ ಕರೆದು ಇಲ್ಲಿ ತೀರ್ಮಾನ ಮಾಡಿ, ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ನೀಡುತ್ತೇವೆ ಎಂದಿದ್ದಾರೆ. ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಿ ಸಭೆ ನಡೆಸಬಹುದು” ಎಂದು ತಿಳಿಸಿದರು.

ಮುದ್ದಹನುಮೇಗೌಡ ಸೇರ್ಪಡೆ

“ಮಾಜಿ ಸಂಸದ ಮುದ್ದ ಹನುಮೇಗೌಡ ಅವರು ನನ್ನನ್ನು ಸಹ ತುಮಕೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಅಭ್ಯಂತರವಿಲ್ಲ. ಈ ಬಗ್ಗೆ ಒಮ್ಮತದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿದ್ದು, ಜಿಲ್ಲೆಯ ನಾಯಕರು ತೀರ್ಮಾನ ಮಾಡುವಂತೆ ಹೇಳಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X