ದಾವಣಗೆರೆ | ವೇತನ ಹೆಚ್ಚಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಒತ್ತಾಯ

Date:

Advertisements

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರ ಸಂಘಟನೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರಗೆ ಮನವಿ ಸಲ್ಲಿಸಿದರು.

ದಾವಣಗೆರೆಯ ಜಿಎಂಐಟಿ ಕ್ಯಾಂಪಸ್‌ನ ಆವರಣದಲ್ಲಿರುವ ಅತಿಥಿ ಗೃಹಕ್ಕೆ ತೆರಳಿ ಎಐಟಿಯುಸಿ ನೇತೃತ್ವದ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಮತ್ತು ಬಿಸಿಯೂಟ ತಯಾರಕರ ಸಂಘಟನೆ ಕಾರ್ಯಕರ್ತೆಯರು ಜಿ.ಎಂ.ಸಿದ್ದೇಶ್ವರ  ಎದುರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಕೆಲಸಕ್ಕೆ ತಕ್ಕಂತೆ ವೇತನ ದೊರೆಯುತ್ತಿಲ್ಲ. ಸಂಸದರ ಗಮನಕ್ಕೆ ತಂದು ಮುಂಬರುವ ಬಜೆಟ್ ನಲ್ಲಿ ಸ್ಕೀಮ್ ವರ್ಕರ್ಸ್ ಗಳಿಗೆ ಕನಿಷ್ಠ ವೇತನ ಜಾರಿಗೊಳಿಸುವುದು, ನಿವೃತ್ತಿ ಪಿಂಚಣಿ ಜಾರಿಗೊಳಿಸುವುದು, ಆರೋಗ್ಯ ವಿಮೆ, ಗ್ರಾಚ್ಯುಟಿ, ಮರಣ ಪರಿಹಾರ ಹಾಗೂ ಮತ್ತಿತರೆ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಒತ್ತಾಯ ಮಾಡಬೇಕೆಂದರು.

Advertisements

ಇದಕ್ಕೆ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರದಲ್ಲಿ ಈ ಕುರಿತು ಸಂಬಂಧಿಸಿದಂತೆ ಇಲಾಖೆ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಒತ್ತಾಯಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ವೇಳೆ ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಆವರಗೆರೆ ಚಂದ್ರು, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾಧ್ಯಕ್ಷೆ ಕಾಂ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ, ಮುಖಂಡರುಗಳಾದ ನಿರ್ಮಲ, ಗೀತಾ, ರೇಣುಕಮ್ಮ, ಅಶ್ವಿನಿ, ಜಿಲ್ಲಾ ಸಂಚಾಲಕ ಆವರಗೆರೆ ವಾಸು, ಎಐವೈಎಫ್‌ನ ಕೆರನಹಳ್ಳಿ ರಾಜು, ಸುಶೀಲಮ್ಮ, ಭರಮಕ್ಕ, ಬಿಸಿಯೂಟ ತಯಾರಕರ ಮುಖಂಡರುಗಳಾದ ಸರೋಜಾ, ಜ್ಯೋತಿ ಲಕ್ಷ್ಮಿ, ಪದ್ಮಾ, ಸುಭದ್ರಮ್ಮ, ಮಂಜುಳಾ ಇತರ ಕಾರ್ಯಕರ್ತರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X