ಚಿತ್ರದುರ್ಗ | ದಲಿತ ಮಹಿಳೆ ಮೇಲೆ ಹಲ್ಲೆ; ಸವರ್ಣೀಯರ ವಿರುದ್ಧ ದೂರು ದಾಖಲು

Date:

Advertisements

ನೆಲ ಸಾರಿಸಲು ಮನೆ ಮುಂದೆ ಬಿದ್ದಿದ್ದ ಸಗಣಿ ತೆಗೆದುಕೊಂಡು ಬಂದಿದ್ದಾರೆಂಬ ಕಾರಣಕ್ಕೆ ಸವರ್ಣೀಯರು ದಲಿತ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಅರಬಘಟ್ಟ ಗ್ರಾಮದಲ್ಲಿ ನಡೆದಿದೆ.

ಅರಬಘಟ್ಟ ಗ್ರಾಮದ ವಸಂತಮ್ಮ ಎನ್ನುವ ದಲಿತ ಮಹಿಳೆ ಹಲ್ಲೆಗೊಳಗಾಗಿರುವ ಸಂತ್ರಸ್ತೆ. ಇವರು ಸವರ್ಣೀಯರ ಮನೆ ಮುಂದೆ ಬಿದ್ದಿದ್ದ ಸಗಣಿಯನ್ನು ನೆಲಸಾರಿಸಲು ತೆಗೆದುಕೊಂಡ ಕಾರಣ ಮನೆಯ ಮಾಲೀಕರೆಲ್ಲರೂ ಸೇರಿ ಮನೆಯೊಳಗಿನಿಂದ ದರ ದರನೆ ಎಳೆದು ತಂದು ಮೈ ಮೇಲೆ ಬಟ್ಟೆ ಇಲ್ಲದಂತೆ ಮಾಡಿ ಮನಬಂದಂತೆ ಥಳಿಸಿ ದೌರ್ಜನ್ಯ ಎಸಗಿದ್ದಾರೆ.

“ಸತೀಶ, ಯೋಗೇಶ, ದ್ರಾಕ್ಷಾಯಿಣಮ್ಮ ಮತ್ತು ಕವಿತ ಎನ್ನುವವರು ನನ್ನನ್ನು ಮನೆಯಿಂದ ಎಳೆತಂದು ಹೊಡೆದಿದ್ದಾರೆ. ಸಾಲದೆಂಬಂತೆ ಮರ್ಮಾಂಗಕ್ಕೆ ಕಾಲಿನಿಂದ ಹೊದ್ದಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಜಾತಿ ನಿಂದನೆ ಮಾಡಿದ್ದಾರೆ ಇವರ ದೌರ್ಜನ್ಯದಿಂದಾಗಿ ನಾವು ಊರಿನಲ್ಲಿ ಇರದಂತಾಗಿದೆ” ಎಂದು ಹಲ್ಲೆಗೊಳಗಾದ ವಸಂತಮ್ಮ ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸ್ವಚ್ಛ ನಗರಗಳಲ್ಲಿ 27ನೇ ಸ್ಥಾನಕ್ಕೆ ಕುಸಿದ ಮೈಸೂರು

ಸಂತ್ರಸ್ತ ಮಹಿಳೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹೊಸದುರ್ಗ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ವಿಷಯ ತಿಳಿಯುತ್ತಿದ್ದಂತೆ ಸಮಾಜದ ಮುಖಂಡರುಗಳಾದ ಕೃಷ್ಣಪ್ಪ, ರಾಮಣ್ಣ, ಪರಮೇಶ್ವರ್ ಸೇರಿದಂತೆ ಇತರರು ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಗೆ ಸಾಂತ್ವಾನ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X