ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ಗೆ ಶಿವಮೊಗ್ಗದಲ್ಲಿ ಅಧಿಕೃತ ಚಾಲನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮನಸೂರೆಗೊಂಡ ಗೀತಗಾಯನ; ಕುಣಿದು ಕುಪ್ಪಳಿಸಿದ ಯುವಜನತೆ

Advertisements

ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ‘ಯುವನಿಧಿ’ ಯೋಜನೆಯ ನೇರ ನಗದು ವರ್ಗಾವಣೆ ಬೃಹತ್ ಕಾರ್ಯಕ್ರಮದ ವೇದಿಕೆಗೆ ಗಣ್ಯರು ಆಗಮಿಸುವ ಮುನ್ನ ನಾಡಿನ ಹೆಸರಾಂತ ಸಂಗೀತಗಾರರು ನಡೆಸಿಕೊಟ್ಟ ತತ್ವಪದ, ಜನಪ್ರಿಯ ಚಿತ್ರಗೀತೆಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಯುವಕ-ಯುವತಿಯರು ಲಯಬದ್ಧವಾಗಿ ಹೆಜ್ಜೆ ಹಾಕಿದ್ದು ಕಾರ್ಯಕ್ರಮದ ಸಂತಸ, ಸಂಭ್ರಮಗಳನ್ನು ನೂರ್ಮಡಿಗೊಳಿಸಿತು.

ಸಂತ ಶಿಶುನಾಳ ಶರೀಫರ ‘ಕೋಡಗನ್ನ ಕೋಳಿ ನುಂಗಿತ್ತ’ ,’ತರವಲ್ಲ ತಗೀ ನಿನ್ನ ತಂಬೂರಿ ಸ್ವರ’ ತತ್ವಪದಗಳು ಅಜಯ್ ವಾರಿಯರ್ ಮತ್ತು ತಂಡದವರಿಂದ ಅನುರಣಿಸಿದವು, ಸಂತೋಷದೇವ್ ಅವರು ಹಾಡಿದ ‘ಬೆಳ್ಳಿ ಮೂಡಿತೋ ಕೋಳಿ ಕೂಗಿತೋ’ ಡಾ.ರಾಜ್ ಅಭಿನಯದ ಗೀತೆಗೆ ನೆರೆದ ಜನ ಕುಣಿದು ಕುಪ್ಪಳಿಸಿತು, ಅನುರಾಧಭಟ್ ಅವರು ‘ಅಪ್ಪ ಐ ಲವ್ ಯೂ’ , ‘ಕಣ್ಣು ಹೊಡಿಯಾಕ ಮೊನ್ನೆ ಕಲತನೀ….’ ಹಾಡುಗಳು ಕೇಳುಗರ ಮನಗೆದ್ದವು. ಸಮೂಹ ವೃಂದಗಾನದಲ್ಲಿ ಮೂಡಿ ಬಂದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು ಸಭಾಮಂಟಪದಲ್ಲಿ ಸಂಚಲನ ಉಂಟು ಮಾಡಿತು.

‘ಗೊಂಬೆ ಹೇಳುತೈತೆ ಮತ್ತೆ ಹೇಳುತೈತೇ ನೀನೆ ರಾಜಕುಮಾರ’ ಗೀತೆಯು ಯುವಸಮೂಹವನ್ನು ಭಾವಪರವಶರನ್ನಾಗಿಸಿತು. ಸಾವಿರಾರು ಯುವಜನರು ತಮ್ಮ ಮೊಬೈಲ್‌ಗಳ ಟಾರ್ಚ್ ಬೆಳಗಿ ಡಾ.ಪುನೀತ್ ರಾಜ್‌ಕುಮಾರ್ ಅವರಿಗೆ ಸಮಾರಂಭದಿಂದಲೇ ಗೌರವ ಸೂಚಿಸಿದ್ದು ವಿಶೇಷವಾಗಿತ್ತು.

ಡಾ.ಅನೀಶ್ ವಿದ್ಯಾಶಂಕರ್ ಅವರು ವಯೋಲಿನ್‌ನಲ್ಲಿ ಕನ್ನಡ ಚಿತ್ರಗೀತೆಗಳ ನಾದಸುಧೆ ಹರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X