ನಾಪತ್ತೆಯಾಗಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಳಗೋಟೆ ಬಡಾವಣೆಯ ನಿವಾಸಿ, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ (45) ಎಂದು ಗುರುತಿಸಲಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ನಾಗರಾಜ್ ಅವರು ಜನವರಿ 3ರಂದು ಚಳ್ಳಕೆರೆ ಪಟ್ಟಣದಿಂದ ನಾಪತ್ತೆಯಾಗಿದ್ದರು. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ಶುಕ್ರವಾರ ದುರ್ಗಾವರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಸುಮಾರು ನಾಲ್ಕೈದು ದಿನಗಳ ಹಿಂದೆಯೇ ಅವರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.