ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ ಯಶವಂತಪುರ ಮತ್ತು ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.
(ರೈಲು ಸಂಖ್ಯೆ 06235/06236) ಯಶವಂತಪುರ-ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಒಂದು ಟ್ರಿಪ್ ಸಂಚರಿಸಲಿದೆ.
(ರೈಲು ಸಂಖ್ಯೆ-06235) ಯಶವಂತಪುರ-ಕೊಚುವೇಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಜನವರಿ 13 ರಂದು ರಾತ್ರಿ 11.55 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಸಂಜೆ 07.10ಕ್ಕೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ.
(ರೈಲು ಸಂಖ್ಯೆ-06236) ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 14 ರಂದು ರಾತ್ರಿ 10 ಗಂಟೆಗೆ ಕೊಚುವೇಲಿಯಿಂದ ಹೊರಟು ಮರುದಿನ ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು ಎರಡು ಮಾರ್ಗಗಳಲ್ಲಿ, ಎಸ್ಎಂವಿಟಿ ಬೆಂಗಳೂರು, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ಒಟ್ಟಪ್ಪಲಂ, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗನ್ನೂರ್ ಕಾಯಂಕುಲಂ ಹಾಗೂ ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ಮರ ಅಡ್ಡಿ; ಬುಡಕ್ಕೆ ಆ್ಯಸಿಡ್ ಹಾಕಿದ ದುರುಳರು; ಇಬ್ಬರ ವಿರುದ್ಧ ಬಿಬಿಎಂಪಿಗೆ ಸ್ಥಳೀಯರ ದೂರು
ಈ ರೈಲಿನಲ್ಲಿ ಎಸಿ ಫಸ್ಟ್ ಕ್ಲಾಸ್-1, ಎಸಿ ಟು ಟೈರ್ -2, ಎಸಿ ತ್ರಿ ಟೈರ್-6, ಪ್ಯಾಂಟ್ರಿ ಕಾರ್-1, ಸ್ಲೀಪರ್ ಕ್ಲಾಸ್-8, ಜನರಲ್ ಸೆಕೆಂಡ್ ಕ್ಲಾಸ್-2 ಮತ್ತು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್-2 ಸೇರಿದಂತೆ ಒಟ್ಟು 22 ಬೋಗಿಗಳು ಇರಲಿವೆ.
ಹೆಚ್ಚಿನ ಮಾಹಿತಿ ಮತ್ತು ಕಾಯ್ದಿರಿಸುವಿಕೆಗಾಗಿ, ಪ್ರಯಾಣಿಕರು ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಲು ಅಥವಾ ಅಧಿಕೃತ ವೆಬ್ ಸೈಟ್ (https://enquiry.indianrail.gov.in)ಗೆ ಭೇಟಿ ನೀಡಿ. 139 ನಂಬರಗೆ ಡಯಲ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದೆ.