ವಿಜಯಪುರ | ಜ್ವಲಂತ ಸಮಸ್ಯೆಗಳ ವಿರುದ್ಧ ಸಹಿ ಸಂಗ್ರಹ ಅಭಿಯಾನ

Date:

Advertisements

ಕೇಂದ್ರ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದು ಒಂದು ದಶಕವೇ ಆಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮುಂತಾದ ವಿಷಯಗಳನ್ನು ಬಿಟ್ಟು ಬಿಜೆಪಿ ಸರ್ಕಾರವು ಈಗ ವಿಕಸಿತ ಭಾರತದ ಬಗ್ಗೆ ಭಾರೀ ಪ್ರಚಾರ ಮಾಡುತ್ತಿದೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ ಭಗವಾನ್‌ ರೆಡ್ಡಿ ಟೀಕಿಸಿದರು.

ವಿಜಯಪುರದ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದಿಂದ ನಗರದ ಗಾಂಧಿ ವ್ರತ್ತದಲ್ಲಿ ನಡೆದ ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು.

“ಅಮೆರಿಕಾ, ಜಪಾನ್, ಇಂಗ್ಲೆಂಡ್‌ಗಳಂತೆ ಭಾರತವೂ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಸದ್ಯದಲ್ಲೇ ಸೇರುತ್ತದೆಂದು ಮೋದಿಯವರು ಭಾಷಣ ಬಿಗಿಯುತ್ತಾರೆ. ಆದರೆ ವಾಸ್ತವ ಪರಿಸ್ಥಿತಿ ಏನು? ಅಭಿವೃದ್ಧಿ ಆಗಿದೆ ಎಂದರೆ ಯಾರ ಅಭಿವೃದ್ಧಿ ಎಂಬ ಪ್ರಶ್ನೆ ಕೇಳಿಕೊಳ್ಳಬೇಕು” ಎಂದರು.

Advertisements

“ಶಿಕ್ಷಣ, ಆರೋಗ್ಯ ರಂಗಗಳು ಖಾಸಗೀಕರಣಗೊಂಡು ಜನರ ಕೈಗೆ ಎಟುಕದಂತಾಗಿವೆ. ವಿದ್ಯಾವಂತರಿಗೂ ಉದ್ಯೋಗಗಳು ದೊರಕುತ್ತಿಲ್ಲ. ಕೈಗಾರಿಕೆಗಳು ನಗರದ ಸುತ್ತಮುತ್ತಲಿನ ಭೂಮಿ ಪಡೆದು, ರಿಯಾಯಿತಿ ದರದಲ್ಲಿ ನೀರು, ವಿದ್ಯುತ್, ತೆರಿಗೆ ವಿನಾಯಿತಿ ಪಡೆದರೂ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಕೆಲಸ ಕೊಡುತ್ತಿಲ್ಲ. ಇತ್ತೀಚೆಗೆ ಮೈಸೂರಿನ ಕಡಕೊಳ ಸಮೀಪದ ಯುವ ರೈತನೊಬ್ಬ ಕಚೇರಿ ಕಚೇರಿ ಅಲೆದು ಹತಾಶೆಯಿಂದ ಅತ್ಯಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರೈತರು ಬದುಕು ಸಂಕಷ್ಟಮಯವಾಗಿದೆ. ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ವಾಗ್ದಾನ ನೀಡಿದ್ದ ಕೇಂದ್ರ ಸರ್ಕಾರ ಎರಡು ವರ್ಷಗಳ ನಂತರವೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದ ಬಗರ್ ಹುಕುಂ ರೈತರ ಭೂಮಿಗೆ ಹಕ್ಕುಪತ್ರ ಇಲ್ಲದೆ ಸತತವಾಗಿ ಹೋರಾಡುತ್ತಿದ್ದಾರೆ. ಅರಣ್ಯನಾಶ, ಹವಾಮಾನ ಬದಲಾವಣೆಯ ಕಾರಣಗಳಿಂದ ಮಳೆ ಅನಿಶ್ಚಿತವಾಗಿದೆ. ಹಾಗಿದ್ದರೂ ಕೂಡ ಕೇಂದ್ರ ಸರ್ಕಾರವು ಅರಣ್ಯ ಸಂರಕ್ಷಣಾ ಕಾಯಿದೆಯನ್ನು ದುರ್ಬಲಗೊಳಿಸಿ, ಗಣಿಗಾರಿಕೆ, ಅಭಿವೃದ್ಧಿ ಯೋಜನೆಗಳಿಗೆ ಅರಣ್ಯಗಳಲ್ಲಿ ಅನುಮತಿ ನೀಡಲು ಮುಂದಾಗಿದೆ. ಆದರೆ, ಅದೇ ಕಾಡುಗಳಲ್ಲಿ ಶತಮಾನಗಳಿಂದ ವಾಸಿಸುವ ಯಾವುದೇ ನಾಗರಿಕ ಸೌಲಭ್ಯಗಳನ್ನು ಪಡೆಯದ ಆದಿವಾಸಿಗಳನ್ನು ಬಲವಂತವಾಗಿ ಹೊರಹಾಕಲಾಗುತ್ತಿದೆ. ಅಲ್ಲಿ ಐಷಾರಾಮಿ ಜಂಗಲ್ ರೆಸಾರ್ಟ್‌ಗಳು ತಲೆ ಎತ್ತಿವೆ. ಕೈಗಾರಿಕಾ ಮಾಲೀಕರಿಗೆ ಅನುಕೂಲವಾಗುವಂತೆ ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ಭಾರತೀಯ ರಾಮ: ವಿಶ್ವನಾಥ್

ಪಕ್ಷದ ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್ ಟಿ, ಸದಸ್ಯರುಗಳಾದ ಶಿವಬಾಳಮ್ಮ ಕೊಂಡಗೊಳ್ಳಿ, ಸುರೇಖಾ ಕಡಪಟ್ಟಿ, ಶಿವಾನಂದ, ದ್ಯಾಮಣ್ಣ ಬಿರಾದಾರ, ಅರ್ಪಿತಾ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X