ಗದಗ | ಜನವಿರೋಧಿ ಕೇಂದ್ರ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ : ಮಾರುತಿ ಚಟಗಿ

Date:

Advertisements

ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸಿಐಟಿಯು ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಸಂಘಟನೆಯಿಂದ ಫೆ. 14ರವರೆಗೆ ಸಹಿ ಸಂಗ್ರಹ ಚಳುವಳಿ ಹಮ್ಮಿಕೊಂಡು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಮುಖಂಡ ಪೀರು ರಾಠೋಡ್ ಮಾತನಾಡಿ, “ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿಯವರ ಕನಸಿನ ಭಾರತ ಇಂದಿಗೂ ನಿರ್ಮಾಣವಾಗಲಿಲ್ಲ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದೇಶಾದ್ಯಂತ ಸಿಐಟಿಯು ಸಹಿ ಸಂಗ್ರಹ ಚಳುವಳಿ ಹಮ್ಮಿಕೊಂಡಿದೆ. ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋಮು ಗಲಭೆ ಅಳಿದು ಸೌಹಾರ್ದತೆ ಭಾರತ ಉಳಿಯಬೇಕಿದೆ. ದೇಶದ ಕಾರ್ಮಿಕರು, ಯುವಜನರ, ಕಾರ್ಮಿಕ ರೈತರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದಾರೆ” ಎಂದು ಹೇಳಿದರು.

“ಕೇಂದ್ರದ ಮೋದಿ ನೇತ್ರತ್ವದ ಸರ್ಕಾರವು ಕಾರ್ಮಿಕ ವಿರೋದಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇದರಿಂದ ಬಡ ಕೂಲಿಕಾರರ, ಮಹಿಳೆಯರ, ರೈತರ ಬದುಕು ಚಿಂತಾಜನಕವಾಗಿದೆ. ಸ್ಕೀಂ ಕೆಲಸಗಾರರಿಗೆ ಕನಿಷ್ಠ ವೇತನ ನೀಡಬೇಕು. ಕಾರ್ಮಿಕ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಸಿಗಬೇಕಾದರೆ ದುಡಿಯುವ ವರ್ಗದವರ ಪರ ನೀತಿಗಳನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಸಿಐಟಿಯು ಮುಖಂಡ ಮಾರುತಿ ಚಟಗಿ ಮಾತನಾಡಿ, “ಕೇಂದ್ರ ಸರಕಾರವು ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಮಹಿಳಾ ವಿರೋಧಿ ಕಾನೂನು ಜಾರಿಗೊಳಿಸುತ್ತಿದೆ. ಜನರಿಗೆ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಲು ದೇಶದಲ್ಲಿ ಎರಡು ಕೋಟಿ ಸಹಿ ಸಂಗ್ರಹಕ್ಕೆ ಕರೆ ಕೊಟ್ಟಿದ್ದೇವೆ. ಗ್ಯಾಸ್, ತೈಲ್‌ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದೆ. ರೈಲ್ವೆ, ವಿದ್ಯುತ್ ಖಾಸಗೀಕರಣಗೊಳಿಸಿದೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ. ಇಂತಹ ಕೇಂದ್ರ ಸರಕಾರಕ್ಕೆ ಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರು ರಾಠೋಡ್, ಪೀರು ರಾಠೋಡ್, ಬಾಲು ರಾಠೋಡ್, ಮೆಹಬೂಬ್ ಹವಾಲ್ದಾರ್ ಸೇರಿದಂತೆ ಇತರರಿದ್ದರು.

ಬೇಡಿಕೆಗಳು: 

1. ಬೆಲೆ ಏರಿಕೆ ತಡೆಗಟ್ಟಲು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರ ಪರ ನೀತಿ ಜಾರಿ ಮಾಡಬೇಕು
2. ರೈತ ವಿರೋಧಿ ಕಾನೂನುಗಳ ವಾಪಸ್ಸಾತಿಗಾಗಿ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು.
3. ರೈಲ್ವೆ, ವಿದ್ಯುತ್ ಸೇರಿದಂತೆ ಸಾರ್ವಜನಿಕ ವಲಯದ ಖಾಸಗೀಕರಣ ನೀತಿಗಳನ್ನು ಕೈಬಿಡಲು  ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳ ವಾಪಸ್ ಪಡೆಯಬೇಕು.
4. ಕಾರ್ಮಿಕ ಕಾನೂನುಗಳ ಜಾರಿಗಾಗಿ ಅಸಂಘಟಿತ ಕಾರ್ಮಿಕರಿಗೆ ವಸತಿ, ಭವಿಷ್ಯ‌ ನಿಧಿ ಮುಂತಾದ ಕಲ್ಯಾಣ ಸೌಲಭ್ಯಗಳ ಜಾರಿಗೊಳಿಸಬೇಕು.
5. ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಟ ವೇತನ, ಸೇವಾ ಭದ್ರತೆಯನ್ನು ನೀಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X