ಬೆಂಗಳೂರು ಟ್ರಾಫಿಕ್ ಸಮಸ್ಯೆ | ಸುರಕ್ಷಿತ ಸಂಚಾರಕ್ಕೆ ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಬಳಕೆ: ಪರಮೇಶ್ವರ್

Date:

Advertisements

ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಮಟ್ಟದ ಅಗತ್ಯ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇಶದಲ್ಲಿನ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತೀರ ಕಡಿಮೆಯಾಗಿದೆ. ಕಮಾಂಡ್ ಸೆಂಟರ್‌ನಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ‌ ಮೂಲಕ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲಾಗುತ್ತಿದೆ. ಜನರು ಮತ್ತಷ್ಟು ಸುರಕ್ಷಿತವಾಗಿ ಸಂಚರಿಸುವ ದೃಷ್ಟಿಯಿಂದ ತಂತ್ರಜ್ಞಾನ ಬಳಸಲಾಗುವುದು” ಎಂದರು.

“ವಾಹನ ಚಾಲನೆ ವೇಳೆ ನಮ್ಮ ಸುರಕ್ಷತೆಯ ಜೊತೆಗೆ ಬೇರೆಯವರ ಪ್ರಾಣ ರಕ್ಷಣೆಯ ಹೊಣೆ ನಮ್ಮ ಮೇಲಿದೆ. ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಅನಾಹುತಗಳನ್ನು ತಪ್ಪಿಸಬಹುದು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಅಯೋಗ್ಯ ರಾಜಕಾರಣಿಗಳಿಗೆ ರಾಮ ಬರೀ ರಾಜಕೀಯ ಲಾಭದ ಸರಕು ಅಷ್ಟೇ: ನಟ ಕಿಶೋರ್

“ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ವಾಹನಗಳಿವೆ. 2023ರಲ್ಲಿ 900 ಜನ ರಸ್ತೆ ಅಪಘಾತದಲ್ಲಿ ಪ್ರಾಣ‌ ಕಳೆದುಕೊಂಡಿದ್ದಾರೆ. ಇದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಜನರಿಗೆ ಟ್ರಾಫಿಕ್ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು.

“ದೇಶದಲ್ಲೇ ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಬಳಕೆ ಮೂಲಕ ಟ್ರಾಫಿಕ್ ನಿಯಂತ್ರಿಸುವ “ಬೆಂಗಳೂರು ಟ್ರಾಫಿಕ್ ಇಂಜಿನ್”ಗೆ ಚಾಲನೆ ನೀಡಲಾಯಿತು. ಈ ತಂತ್ರಜ್ಞಾನವು ತುರ್ತುಸೇವೆ ವಾಹನಗಳ ಸಂಚಾರಕ್ಕೆ ಹೆಚ್ಚು ಅನುಕೂಲವಾಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X