ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣ | ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗ ಮೊರೆ ಹೋಗುತ್ತೇವೆ: ಬೊಮ್ಮಾಯಿ

Date:

Advertisements

ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ” ಎಂದು ಒತ್ತಾಯಿಸಿದರು.

“ಮೂವರ ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ” ಎಂದು ಪ್ರಕಟಿಸಿದರು.

Advertisements

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ 30ರಷ್ಟು ಹೆಚ್ಚಾಗಿವೆ” ಎಂದು ಆಕ್ಷೇಪಿಸಿದರು.

“ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ. ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಿದರೆ ಅವರ ಮೇಲೆ ಸರಕಾರದ ವಕ್ರದೃಷ್ಟಿ ಕಾಡುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ಬೆಳಗಾವಿಯಲ್ಲಿ ಅಧಿವೇಶನ ನಡೆಯುವಾಗಲೇ ವಿಧಾನಸೌಧದ ಅತ್ಯಂತ ಹತ್ತಿರ ಇರುವ ಒಬ್ಬ ಹೆಣ್ಮಗಳನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ್ದು ಈ ಸರಕಾರದ ಮತ್ತು ಪೊಲೀಸ್ ಇಲಾಖೆ ಮೇಲೆ ಭಯ ಇಲ್ಲದ್ದನ್ನು ತೋರಿಸಿತ್ತು. ಸಾರ್ವಜನಿಕರು ತಮ್ಮ ರಕ್ಷಣೆ ಬಗ್ಗೆ ಭಯಪಡುವ ಸ್ಥಿತಿ ಉಂಟಾಗಿತ್ತು. ಕೇವಲ ಆಸ್ಪತ್ರೆಗೆ ಹೋಗಿ ನೋಡಿದರೆ ಮುಗಿಯಿತೇ? ಸರಿಯಾದ ತನಿಖೆ ಆಗಿಲ್ಲ. ಹಲವರ ಬಂಧನ ನಡೆದಿಲ್ಲ. ದಲಿತ ಮಹಿಳೆಗೆ ಹೀಗಾದರೂ ಮುಖ್ಯಮಂತ್ರಿಗಳಿಂದ ಕ್ರಮ ಇಲ್ಲ” ಎಂದು ದೂರಿದರು.

“ಸಮುದಾಯ ನೋಡಿ ಕೇಸು ಹಾಕುವಂತೆ ಸ್ಟಾಂಡರ್ಡ್ ಇನ್‍ಸ್ಟ್ರಕ್ಷನ್ ಕೊಟ್ಟಿದ್ದೀರಾ ಎಂದು ಗೃಹ ಸಚಿವರನ್ನು ಪ್ರಶ್ನಿಸಿದರು. ಹಾವೇರಿಯಲ್ಲಿ ನಮ್ಮನ್ನು ಯಾರೂ ಮುಟ್ಟುವುದಿಲ್ಲ ಎಂಬ ಪರಿಸ್ಥಿತಿ ಕೆಲವು ವರ್ಗದ್ದು. ಹಲವೆಡೆ ನೈತಿಕ ಪೊಲೀಸ್‍ಗಿರಿ ನಡೆದಿದೆ. ಶಿರಸಿಯ ಒಬ್ಬ ಹೆಣ್ಮಗಳು ಮತ್ತು ಬೇಕಾದವರು ಹಾನಗಲ್‍ನಲ್ಲಿ ಹೋಟೆಲ್‍ನಲ್ಲಿ ಇದ್ದರೆ ಅಕ್ಕಿಆಲೂರಿನ ಯುವಕರು ಇಬ್ಬರನ್ನೂ ಥಳಿಸಿ ಅವಳ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಇದನ್ನು ಮುಚ್ಚಿ ಹಾಕಲು ಮುಂದಾಗಿದ್ದರು” ಎಂದು ತಿಳಿಸಿದರು.

“ಗ್ರಾಮೀಣ ಪೊಲೀಸ್ ಸ್ಟೇಷನ್‍ಗಳು ಕಲೆಕ್ಷನ್ ಅಡ್ಡಾ ಆಗಿ ಪರಿವರ್ತನೆಗೊಂಡಿವೆ. ಕೆಲವೆಡೆ ಪೊಲೀಸ್ ಇನ್‍ಸ್ಪೆಕ್ಟರ್ ಗಳೇ ಇಸ್ಪೀಟ್, ಮದ್ಯದ ದಂಧೆಗೆ ಪ್ರೋತ್ಸಾಹ ಕೊಡುತ್ತಿದ್ದಾರೆ. ಕರ್ನಾಟಕವು ಜಂಗಲ್ ರಾಜ್ಯ ಆಗಿದೆ. ಕಾಂಗ್ರೆಸ್ ಸ್ಥಳೀಯ ನಾಯಕರ ಬೆಂಬಲದಿಂದ ಪುಡಿ ರೌಡಿಗಳು ಮತ್ತೆ ಇಸ್ಪೀಟ್ ಕ್ಲಬ್, ಜೂಜು ಆರಂಭಿಸಿದ್ದಾರೆ” ಎಂದರು.

“ರಾಜ್ಯದ ವಾಸ್ತವ ಸ್ಥಿತಿಯನ್ನು ಹಣಕಾಸು ಆಯೋಗದ ಮುಂದೆ ಹಿಂದಿನ ಸಿದ್ದರಾಮಯ್ಯರ ಸರಕಾರ ಇಟ್ಟಿರಲಿಲ್ಲ. ಈ ವಿಷಯದಲ್ಲಿ ಇವರ ವೈಫಲ್ಯವಿದೆ. 14ನೇ ಹಣಕಾಸಿಗಿಂತ ಇನ್ನೂ 1 ಲಕ್ಷ ಕೋಟಿ ಹೆಚ್ಚು ಹಣ ಬರಲಿದೆ. ನಿಗದಿತ ಕಾಲಾವಧಿ ಮುಗಿದಿಲ್ಲ. ಅಷ್ಟರೊಳಗೆ ಅನ್ಯಾಯ ಆಗಿದೆ ಎಂದರೆ ಹೇಗೆ?” ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X