ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಊಹಾಪೋಹ: ಸಿದ್ದರಾಮಯ್ಯ

Date:

Advertisements

ಕಾಂಗ್ರೆಸ್ ಪಕ್ಷ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲ ಧರ್ಮ, ಜಾತಿಯವರ ಪರವಾಗಿ ಇರುವವರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.

ದೇವದುರ್ಗದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಮಾಜ ವಿಭಜನಾ ಹೇಳಿಕೆಗೆ ಉತ್ತರಿಸಿ, “ಸಮಾಜದಲ್ಲಿನ ಎಲ್ಲ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು” ಎಂದರು.

ಮೈಸೂರು ಲೋಕಸಭಾ ಕ್ಷೇತ್ರ ದಿಂದ ಯತೀಂದ್ರ ಸ್ಪರ್ಧೆ: ಊಹಾಪೋಹ

Advertisements

ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, “ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಸುಮ್ಮನೆ ಊಹಾಪೋಹಗಳು ಅಷ್ಟೇ” ಎಂದರು.

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು: ಸಿಎಂ ಸಿದ್ದರಾಮಯ್ಯ

ವರದಿ ಸಲ್ಲಿಕೆಯ ನಂತರ ತೀರ್ಮಾನ

“ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ನೀಡಲಾಗುವುದು” ಎಂದು ಹೇಳಿದರು.

“ಅಯೋಧ್ಯೆಗೆ ನಾನು ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿ ಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ
ಮಾಡಬಾರದು. 22 ರಂದು ರಾಜಕೀಯವಾಗಿ ಉದ್ಘಾಟನಾ ಸಭೆಯನ್ನು ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನ ವಿರೋಧಿಗಳಲ್ಲ” ಎಂದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X