ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ, ಪ್ರಚಾರದಲ್ಲಿ ಇರುವೆ: ಹೆಚ್ ಡಿ ದೇವೇಗೌಡ

Date:

Advertisements

ಜ್ಞಾಪಕ ಶಕ್ತಿ ಇದೆ. ಆದರೆ, ಓಡಾಡಲು ಕಷ್ಟವಾಗುತ್ತದೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡ ಸ್ಪಷ್ಟಪಡಿಸಿದರು.

ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ” ಎಂದರು.

“ಲೋಕಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೆ, ಅಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

Advertisements

ಹೆಚ್ ​ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ವಿಚಾರ ಪ್ರಸ್ತಾಪಿಸಿದಾಗ, “ನನ್ನ ಮುಂದೆ ಚರ್ಚೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ಯಾವುದನ್ನೂ ಬಿಟ್ಟುಕೊಡುವುದಿಲ್ಲ. ಅವರ ಜೊತೆಗಿರುವ ಪೊಲೀಸರಿಗೂ ಗೊತ್ತಾಗಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಪ್ರಜ್ವಲ್​ಗೆ ಪ್ರಧಾನಿ ಮೋದಿ ಅವರು ಆಶೀರ್ವಾದ ಮಾಡಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಕೂಡಾ ಆಶೀರ್ವಾದ ಮಾಡುತ್ತಾರೆ. ನಾನೂ ಆಶೀರ್ವಾದ ಮಾಡುತ್ತೇನೆ, ಜನರು ಆಶೀರ್ವಾದ ಮಾಡುತ್ತಾರೆ” ಎಂದರು.

ಸಿದ್ದರಾಮಯ್ಯ ರಾಮನ ದರ್ಶನಕ್ಕೆ ಹೋಗಲಿ

“ಸಿಎಂ ಸಿದ್ದರಾಮಯ್ಯ ಅವರು ಅಯೋಧ್ಯೆಗೆ ಜನವರಿ 22ರಂದು ಹೋಗುವುದಿಲ್ಲ ನಂತರ ಹೋಗುತ್ತೇನೆಂದು ಎಂದು ಹೇಳಿದ್ದಾರೆ. ಅವರ ಪಕ್ಷ ನಿರ್ಧಾರ ತೆಗೆದುಕೊಂಡಿದೆ. ಮುಜರಾಯಿ ಇಲಾಖೆ ದೇವಾಲಯದಲ್ಲಿ ಪೂಜೆಗೆ ಸೂಚಿಸಿದೆ. ಸಾಫ್ಟ್ ಹಿಂದುತ್ವವೋ, ಹಾರ್ಡ್ ಹಿಂದುತ್ವವೋ ಒಟ್ಟಿನಲ್ಲಿ ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X