ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ; ₹2 ಕೋಟಿ ಮೌಲ್ಯದ ಸಾಮಗ್ರಿ ವಶ

Date:

Advertisements

ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ. 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ.

ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ.

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‌ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ್ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಬಳಿಕ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.

Advertisements

ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆಎಸ್‌ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು.‌

ಈ ಸುದ್ದಿ ಓದಿದ್ದೀರಾ? ರಾಮಮಂದಿರಕ್ಕೆ ಮೊದಲು ದಲಿತ ಅರ್ಚಕರನ್ನು ನೇಮಿಸಿ: ಸಚಿವ ಕೆ ಎನ್ ರಾಜಣ್ಣ

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್ ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಕೆಎಸ್‌ಡಿಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X