ಕುಮಟಾದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶನಿವಾರ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ನಡೆದಿತ್ತು. ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ, ‘ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ಹಿಂದೆ ದೇವಾಲಯಗಳಾಗಿದ್ದವು. ಅವುಗಳನ್ನು ಬಾಬ್ರಿ ಮಸೀದಿ ರೀತಿಯಲ್ಲಿ ಹೊಡೆಯಬೇಕು” ಎಂದಿದ್ದರು.
ಅವರ ಹೇಳಿಕೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಒತ್ತಾಯಿಸಿದ್ದರು. ಇದೀಗ, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಧಾರ್ಮಿಕ ಭಾವನೆಗೆ ಧಕ್ಕೆ ಮತ್ತು ಸಾಮಾಜಿಕ ಅಶಾಂತಿ ಸೃಷ್ಠಿಗೆ ಕಾರಣವಾಗುವ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಮೇಲೆ ಐಪಿಸಿ ಸೆಕ್ಷನ್ 153ಎ, 505 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
“ಅನಂತ್ ಕುಮಾರ್ ಹೆಗಡೆ ಅವರು ಕುಮಟಾದಲ್ಲಿ ಮಾತನಾಡಿರುವ ಭಾಷಣ ಆಕ್ಷೇಪಾರ್ಹವಾಗಿವೆ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಹೇಳಿದ್ದಾರೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ಆ ಪಕ್ಷದಲ್ಲಿ ಕೆಲವರಿಗೆ ದ್ವೇಷದ ವಾಂತಿ ಸುರುವಾಗುವದು,,, ಅಷ್ಟು ದ್ವೇಷ ಇದ್ದರೆ ತಾವು ಸ್ವತಃ ಏನೂ ಮಾಡೋದಿಲ್ಲ ಪಾಪದ ಯುವಕರನ್ನು ಪ್ರಚೋದನೆ ಮಾಡಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡುವ ಕುತಂತ್ರ,, ತಮ್ಮ ಮನೆಯಲ್ಲಿ ಕುಟುಂಬದಲ್ಲಿ ಯಾರೂ ಬೀದಿಗೆ ಬರುವುದಿಲ್ಲ,,, ಶೂದ್ರ ಯುವಕರು ಬುದ್ಧವಂತರಾದಾಗ ಮಾತ್ರ ಇಂಥವರ ಸಮಾಜದ ಸೌಹಾರ್ದತೆಯನ್ನು ಮೂರಾಬಟ್ಟೆ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಬುದ್ಧಿಗೆ ಕೊನೆ ಹಾಡಬಹುದು