ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು: ಎಚ್‌ಡಿ ದೇವೇಗೌಡ

Date:

Advertisements

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಸಮಸ್ಯೆಯನ್ನು ಬಗೆಹರಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಇದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾದ ಬಳಿಕ ಕಾವೇರಿ ವಿವಾದ ಬಗೆಹರಿಸಬಹುದು. ಲೋಕಸಭಾ ಚುನಾವಣೆ ಮುಗಿದ ನಂತರ ಮೋದಿ ಈ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಹೇಳಿದ್ದಾರೆ.

”ಕಾವೇರಿ ಸಮಸ್ಯೆಗೆ ಪರಿಹಾರವಿದೆ. ನಮಗೆ ಆಗಿರುವ ಅನ್ಯಾಯವನ್ನು ಪ್ರಧಾನಿ ಮೋದಿಯವರಿಗೆ ಮನವರಿಕೆ ಮಾಡಿಕೊಡಲು ರಾಜ್ಯದ ಸಂಸದರು ಒಟ್ಟಾಗಿ ಹೋರಾಡಬೇಕು. ತಮಿಳುನಾಡಿನಲ್ಲಿ 40 ಸಂಸದರು ಇರಬಹುದು, ನಾಮ್ಮವರು 28 ಮಂದಿ ಇರಬಹುದು. ಆದರೆ, ರಾಜಕೀಯ ಸಂಬಂಧಗಳನ್ನು ಬದಿಗಿಟ್ಟು ನಾವು ಒಂದಾಗಬೇಕು. ಇನ್ನು ಎರಡೂವರೆ ವರ್ಷ ರಾಜ್ಯಸಭೆಯಲ್ಲಿ ಇರುತ್ತೇನೆ. ನನ್ನ ಕೊನೆಯ ಉಸಿರು ಇರುವವರೆಗೂ ಕಾವೇರಿಗಾಗಿ ಹೋರಾಟ ನಡೆಸುತ್ತೇನೆ” ಎಂದರು.

“ಮುಂದಿನ ಸಂಸತ್ ಅಧಿವೇಶನದಲ್ಲಿ ಕಾವೇರಿ ವಿಷಯವನ್ನು ಪ್ರಸ್ತಾಪಿಸುತ್ತೇನೆ. ವಿವಾದದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಅಗತ್ಯವಿದೆ. ಆದರೂ, ಮೋದಿ ತಕ್ಷಣವೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಹೋರಾಡಬೇಕಾಗಿದೆ” ಎಂದು ಹೇಳಿದರು.

Advertisements

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮೋದಿ ಸಂಪುಟಕ್ಕೆ ಸೇರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮೋದಿ ಸಲಹೆ ನೀಡಿದರೆ ಮಾತ್ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕುಮಾರಸ್ವಾಮಿ ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಗೌಡರು ತಾವೂ ಪ್ರಧಾನಿ ಆಗಿದ್ರಿ,,ಆಗ ಕಾವೇರಿ ಸಮಸ್ಯೆ ಬಗೆಹರಿಸಬಹುದು ಇತ್ತು,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X