2023ರಲ್ಲಿ ಬಂಟ್ವಾಳ ಗ್ರಾಮೀಣ ಠಾಣೆಯಲ್ಲಿ ದಾಖಲಾದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶೇಖರ್ ಪೂಜಾರಿ ಎಂಬವರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಿಶೇಷ ಪೋಕ್ಸೊ ಮತ್ತು ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಬಂಟ್ವಾಳ ತಾಲೂಕಿನ ಕುಕ್ಕುರಿ ಎಂಬಲ್ಲಿ ವಾಸವಾಗಿದ್ದ ಶೇಖರ್ ಪೂಜಾರಿ ತನ್ನ ನೆರೆಯ ಮನೆಯ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನೆಂದು ಆರೋಪ ವ್ಯಕ್ತವಾಗಿತ್ತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿ ಪಡೆಯುವ ಪ್ರಕರಣ; 100 ದಿನ ಪೂರೈಸಿದ ಧರಣಿ
ಆರೋಪಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂಬುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದರೆ ಅಭಿಯೋಜನೆಯು ಅಪರಾಧವನ್ನು ಸಾಬೀತುಮಾಡಲು ವಿಫಲವಾಗಿರುವುದಾಗಿ ಅಭಿಪ್ರಾಯಪಟ್ಟು ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿತು.