ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆ

Date:

Advertisements

ಅಯೋಧ್ಯೆಯ ರಾಮ ಮಂದಿರದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ‘ರಾಮ್ ಲಲ್ಲಾ’ ವಿಗ್ರಹ ಜನವರಿ 22 ರಂದು ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೃಢಪಡಿಸಿದೆ.

”ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ಕೃಷ್ಣ ಶಿಲೆಯಿಂದ ಕೆತ್ತಲಾದ ಮೂರ್ತಿಯನ್ನು ಭಗವಾನ್ ಶ್ರೀ ರಾಮಲಲ್ಲಾ ವಿಗ್ರಹವಾಗಿ ಆಯ್ಕೆ ಮಾಡಲಾಗಿದೆ” ಎಂದು ದೇಗುಲ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ”ಅಯೋಧ್ಯೆಯ ರಾಮಮಂದಿರದಲ್ಲಿ ಮೈಸೂರು ಮೂಲದ ಅರುಣ್ ಅವರು ನಿರ್ಮಿಸಿರುವ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

‘ಪ್ರಾಣ ಪ್ರತಿಷ್ಠಾ’ ಮಾಡಲಿರುವ ವಿಗ್ರಹವು ಸುಮಾರು 150-200 ಕೆ.ಜಿ.ಯಿದ್ದು ಜನವರಿ 18 ರಂದು, ವಿಗ್ರಹವನ್ನು ದೇವಾಲಯದ ‘ಗರ್ಭ ಗೃಹ’ದಲ್ಲಿ ಅದರ ಸ್ಥಾನದಲ್ಲಿ ಇರಿಸಲಾಗುತ್ತದೆ ಎಂದು ಚಂಪತ್ ರಾಯ್ ತಿಳಿಸಿದ್ದಾರೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ‘ರಾಮ್ ಲಲ್ಲಾ’ ವಿಗ್ರಹ ಪ್ರತಿಷ್ಠಾಪನೆಗೆ ಅರುಣ್ ಯೋಗಿರಾಜ್ ಸೇರಿದಂತೆ ಮೂವರು ಶಿಲ್ಪಿಗಳ ವಿಗ್ರಹಗಳನ್ನು ಆಯ್ಕೆ ಮಾಡಿತ್ತು.

ಅರುಣ್ ಅವರು ದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಸುಭಾಶ್ ಚಂದ್ರ ಬೋಸ್ ವಿಗ್ರಹ ಸೇರಿದಂತೆ ಹಲವು ವಿಗ್ರಹಗಳನ್ನು ಕೆತ್ತಿದ್ದಾರೆ. ಮಂದಿರದ ಉದ್ಘಾಟನೆಯು ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೆರವೇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿಗ್ರಹ ಪ್ರತಿಷ್ಠಾಪನೆ ಆಗುವವರೆಗೆ ಶಿಲ್ಪಿಯ ಹೆಸರು,, ಪ್ರತಿಷ್ಠಾಪನೆ ಆಗಿ ಪ್ರಾಣ ತುಂಬಿದ ಮೇಲೆ ರಾಮಾನಂದ ಪಂಥದವರಿಗೆ ಸೇರಿಸಿರುವುದು,,ನಂತರ ವಿಗ್ರಹದ ಪೂಜಾ ವಿಧಿಗಳು ಉಡುಪಿ ಸ್ವಾಮಿಗೋಳು ಹೇಳಿದಂತೆ ನಡೆಯುವುದು,,, ಇಷ್ಟೇ ಕಥೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

Download Eedina App Android / iOS

X