ಮದುವೆಗೆ ವಧು ಸಿಗದೆ ಮನೆನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಗುಡೇಕೋಟೆ ಗ್ರಾಮದ ಬಿ ಮಧುಸೂದನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಧುಸೂದನ್ ತಂದೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಾರೆ ಎಂಬ ಕಾರಣಕ್ಕೆ ಯುವಕನನ್ನು ಮದುವೆಯಾಗಲು ಯಾವ ಯುವತಿಯೂ ಒಪ್ಪಿರಲಿಲ್ಲ. ಹೀಗಾಗಿ, ಮನವೊಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷ ಸೇವಿಸಿದ್ದ ಯುವಕನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ.
ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.