ಉತ್ತರ ಪ್ರದೇಶದ ಮಥುರಾದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ಸದ್ಯಕ್ಕೆ ಸರ್ವೇ ಬೇಡ ಎಂದಿರುವ ಸುಪ್ರೀಂ ಕೋರ್ಟ್, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಆ ಮೂಲಕ ಬಲಪಂಥೀಯ ಸಂಘಟನೆಗಳ ಹೋರಾಟಕ್ಕೆ ಹಿನ್ನಡೆಯುಂಟಾಗಿದೆ.
ಉತ್ತರ ಪ್ರದೇಶದ ಮಥುರಾದಲ್ಲಿರುವ 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಕಮಿಷನರ್ ಓರ್ವರನ್ನು ನೇಮಿಸುವಂತೆ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಡಿಸೆಂಬರ್ 14ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
[#KrishnaJanmabhoomi Case]#SupremeCourt to hear mosque committee’s plea against #AllahabadHC order allowing an application for the appointment of a court commissioner to inspect #ShahiEidgahMosque.#SupremeCourtofIndia pic.twitter.com/eGDpzxqiL8
— Live Law (@LiveLawIndia) January 16, 2024
ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ನಡೆಸಿದ ರೀತಿಯಲ್ಲಿಯೇ ಹೈಕೋರ್ಟ್, ಕಳೆದ ತಿಂಗಳು ನ್ಯಾಯಾಲಯ ನೇಮಿಸಿದ ಮತ್ತು ಮೇಲ್ವಿಚಾರಣೆಯ ವಕೀಲ ಕಮಿಷನರ್ ಸಮೀಕ್ಷೆಗೆ ತನ್ನ ಒಪ್ಪಿಗೆ ನೀಡಿತ್ತು.
ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡು, ಸಮೀಕ್ಷೆಗೆ ಆಗ್ರಹಿಸಿ ಒತ್ತಾಯಿಸಿದ್ದವು. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯವು ಈ ಬೇಡಿಕೆಯನ್ನು ಅಂಗೀಕರಿಸಿತ್ತು. ಆದರೆ ಮಸೀದಿಯ ಕಡೆಯವರು ಹೈಕೋರ್ಟ್‌ನಲ್ಲಿ ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.
ವಿವಾದಿತ 13.37 ಎಕರೆ ಜಮೀನಿನ ಸಂಪೂರ್ಣ ಮಾಲೀಕತ್ವಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಯು ಮಥುರಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಶತಮಾನಗಳಷ್ಟು ಹಳೆಯದಾದ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನವನ್ನು ಕೆಡವಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದರು. ಇದು ಮೊಘಲ್ ಚಕ್ರವರ್ತಿ ಔರಂಗಜೇಬನ ಕಾಲದಲ್ಲಿ ನಡೆದಿದ್ದ ಘಟನೆ. ಆತನ ಆದೇಶದ ಮೂಲಕ ಕೆಡವಲಾಗಿತ್ತು ಎಂದು ಅವರು ಆರೋಪಿಸಿದ್ದರು.
Krishna Janmabhoomi case: Supreme Court stays Allahabad High Court direction appointing Commissioner to inspect Shahi Eidgah mosque
report by @AB_Hazardous https://t.co/EA48KCnVjJ
— Bar & Bench (@barandbench) January 16, 2024
ಅರ್ಜಿದಾರರು ಪುರಾವೆಯಾಗಿ, ಮಸೀದಿಯ ಕೆಲವು ಗೋಡೆಗಳ ಮೇಲೆ ಕಮಲದ ಕೆತ್ತನೆಗಳ ಅಸ್ತಿತ್ವವನ್ನು ಪ್ರತಿಪಾದಿಸಿದ್ದರು. ಅಲ್ಲದೇ, ಹಿಂದೂ ಪುರಾಣಗಳಲ್ಲಿ ಹಾವಿನ ದೇವತೆಯಾದ ‘ಶೇಷನಾಗ್’ ಅನ್ನು ಹೋಲುವ ಆಕಾರಗಳು ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿರುವುದನ್ನು ತೋರಿಸುತ್ತದೆ ಎಂದು ವಾದಿಸಿದ್ದರು.
ಇದನ್ನು ಓದಿದ್ದೀರಾ? ಇಂಡಿಗೋ ಘಟನೆ | ವಿಮಾನ ಪ್ರಯಾಣಿಕರ ಅಶಿಸ್ತಿನ ವರ್ತನೆ ಸಹಿಸಲ್ಲ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದ ಮಸೀದಿ ಆಡಳಿತ ಮಂಡಳಿ, 1991 ರ ಪೂಜಾ ಸ್ಥಳಗಳ ಕಾಯಿದೆಯನ್ನು ಉಲ್ಲೇಖಿಸಿ ಅರ್ಜಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದರು. ಆದರೆ ಅಲಹಾಬಾದ್ ಹೈಕೋರ್ಟ್, ಕಳೆದ ಡಿಸೆಂಬರ್ 14ರಂದು ಆದೇಶ ಹೊರಡಿಸಿ, ಮಸೀದಿಯನ್ನು ಪರಿಶೀಲಿಸಲು ಆಯುಕ್ತರ ನೇಮಿಸುವಂತೆ ತಿಳಿಸಿತ್ತು. ಆ ಆದೇಶಕ್ಕೆ ಈಗ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.