ಕೆಪಿಎಸ್‌ಸಿ | ಅನ್ಯಾಯ ಪ್ರಶ್ನಿಸಿದ ವಿದ್ಯಾರ್ಥಿನಾಯಕನ ಬಂಧನ ಖಂಡಿಸಿ ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

Date:

Advertisements

“ನುಡಿದಂತೆ ನಡೆದಿದ್ದೇವೆ ಎಂಬ ಶೋಕಿಗಾಗಿ ಯುವಜನತೆಯ ಸ್ವಾಭಿಮಾನದ ಜೊತೆ ಆಟ ಆಡಬೇಡಿ. ನೇಮಕಾತಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದನ್ನು ಬಿಟ್ಟು ನಿರುದ್ಯೋಗ ಭತ್ಯೆ ಮೂಲಕ ಯುವಜನತೆಯ ಉದ್ಧಾರ ಮಾಡುತ್ತೀವಿ ಎಂಬುದು ನಿಮ್ಮ ಬೂಟಾಟಿಕೆಯಲ್ಲವೇ?” ಎಂದು ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಅವರಿಗೆ ಪ್ರಶ್ನಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿನಾಯಕ ಕಾಂತಕುಮಾರ್‌ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

“ಯುವಜನತೆಯ ಪರವಾಗಿ ನೀವಿದ್ದೀರಿ ಎಂದರೆ, ಕೂಡಲೇ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ವಿರುದ್ಧ ತನಿಖೆ ನಡೆಸಿ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್ವಿರುದ್ಧ ಕ್ರಮ ಕೈಗೊಳ್ಳಿ. ಸ್ಥಾನದಿಂದ ಅವರನ್ನು ಕೂಡಲೇ ಅಲ್ಲಿಂದ ತೆರವು ಮಾಡಿ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

Advertisements

“ಹಿಂದಿನ ಅವಧಿಯ ಸರ್ಕಾರದ ವಿರುದ್ಧ ‘40% ಕಮಿಷನ್ಸರ್ಕಾರಎಂದು ಆರೋಪಿಸಿ, ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೀವಿ ಎಂಬ ವಾಗ್ದಾನವನ್ನು ನೀಡಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಅನ್ಯಾಯವನ್ನು ಪ್ರಶ್ನಿಸಿದ ವಿದ್ಯಾರ್ಥಿಗಳನ್ನೇ ಬಂಧಿಸುವ ಹಂತಕ್ಕೆ ನಿಮ್ಮ ಸರ್ಕಾರ ಇಳಿದಿರುವುದು ಏಕೆ? ಸರ್ವಾಧಿಕಾರದ ಧೋರಣೆ ತಳೆದಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

“ಯುವನಿಧಿ ಯೋಜನೆ ಬಿಡುಗಡೆ ಸಂದರ್ಭ ಪದವಿ ಪಡೆದ ನಂತರ ವಿದ್ಯಾರ್ಥಿಗಳು ಉತ್ತಮ ಉದ್ಯೋಗ ಹುಡುಕಿಕೊಳ್ಳಲು ನಿರುದ್ಯೋಗಭತ್ಯೆ ಕೊಡುತ್ತಿದ್ದೇವೆ ಎಂದು ಘೋಷಣೆ ಮಾಡಿದ್ದೀರಿ. ಆದರೆ, ವಾಸ್ತವದಲ್ಲಿ ಭ್ರಷ್ಟಾಚಾರದಿಂದ ಅಭ್ಯರ್ಥಿಗಳ ಭವಿಷ್ಯವೇ ಹಾಳಾಗುತ್ತಿರುವುದು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ? ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ ಎಂಬ ವಿದ್ಯಾರ್ಥಿ ನಾಯಕನ ಆರೋಪದಲ್ಲಿ ಹುರುಳಿಲ್ಲವೇ? ಹಾಗಿದ್ದರೆ ಫಲಿತಾಂಶ ಪ್ರಕಟಿಸಲು ವಿಳಂಬ ನೀತಿ ಅನುಸರಿಸುತ್ತಿರುವುದೇಕೆ?” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್ ಸ್ಪೋಟಗೊಂಡು ಏಳು ಜನರಿಗೆ ಗಂಭೀರ ಗಾಯ

“ಒಂದೊಂದು ಹುದ್ದೆಯ ಭರ್ತಿ ಮಾಡಲು ಒಂದು ವರ್ಷದ ಬದಲು ಐದು ವರ್ಷ ತೆಗೆದುಕೊಳ್ಳಲಾಗುತ್ತಿದೆ. 15 ನೋಟಿಫಿಕೇಶನ್ಗಳ ಪರೀಕ್ಷೆ ನಡೆದು ಎರಡು ವರ್ಷಗಳಾಗಿದೆ. ಆದರೆ, ಅದರ ಫಲಿತಾಂಶವನ್ನು ಕೆಪಿಎಸ್ಸಿ ಇನ್ನೂ ಪ್ರಕಟಿಸಿಲ್ಲ. ಇದು ಮೇಲ್ನೋಟಕ್ಕೆ ನೇಮಕಾತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬುದನ್ನು ಸಾರಿ ಹೇಳುತ್ತದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X