ದಲಿತ ದೌರ್ಜನ್ಯ ಪ್ರಕರಣ | ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿ, “ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ವರಿಸಿದರು.

“ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು” ಎಂದು ಸೂಚಿಸಿದರು.

Advertisements

“ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ. ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

“ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು GDP ಹೆಚ್ಚಾಗುತ್ತದೆ. ಹೂಡಿಕೆದಾರರು ಬರುತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ. ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೊಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ” ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X