ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳು ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ. 35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಸೈನಿಕ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದು ತಿಳಿಸಿದರು.

Advertisements

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಸ್ಮರಣಾರ್ಥ ‘ರಾಕ್ ಗಾರ್ಡನ್’
ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ ಎಂದರು.

“ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X