ಉಡುಪಿ | ಕಾಂಗ್ರೆಸ್ ಸದಾ ಬಡವರ ಪರ, ನುಡಿದಂತೆ ನಡೆದ ಪಕ್ಷ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ಕಾಂಗ್ರೆಸ್ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಬಡವರ ಪರವಾಗಿದ್ದು, ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದೆ. ಅಧಿಕಾರಕ್ಕೆ ಬಂದ ಏಳು ತಿಂಗಳಲ್ಲೇ ಘೋಷಿಸಿದ್ದ ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ, ಇದು ನಮ್ಮ ಸರ್ಕಾರದ ಹೆಗ್ಗಳಿಕೆಯಾಗಿದೆ” ಎಂದರು.

ದೇಶದಲ್ಲಿ ಉಳುವವನೇ ಭೂ ಒಡೆಯ ಎಂಬ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡಿದ್ದು ನಮ್ಮ ಪಕ್ಷದ ಹೆಗ್ಗಳಿಕೆ. ಹಕ್ಕುಪತ್ರಕ್ಕಾಗಿ 600ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು, ಈ ಪೈಕಿ ಮೊದಲ ಹಂತದಲ್ಲಿ 55 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ಈ ಹಕ್ಕು ಪತ್ರಗಳನ್ನು ಪಡೆದವರು ಇ-ಸ್ವತ್ತಿನಡಿ ಖಾತೆ ಮಾಡಿಸಿಕೊಳ್ಳಬೇಕೆಂದು ಫಲಾನುಭವಿಗಳಿಗೆ ಸಚಿವರು ಸಲಹೆ ನೀಡಿದರು.

Advertisements

ಸಮಾರಂಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸೇರಿದಂತೆ ವಿವಿಧ ಅಧಿಕಾರಿಗಳು, ಮತ್ತಿತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X