ಮುಖ್ಯಮಂತ್ರಿ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಸರ್ಕಾರದ ನಾನಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ವಿಕ್ರಂ ಗೋಪಾಲಸ್ವಾಮಿ ಬಂಧಿತ. ಮಹಿಳಾ ಅಧಿಕಾರಿಯೊಬ್ಬರು ಈತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ವೇಳೆ, ಈತ ನಿವೃತ್ತ ಅಧಿಕಾರಿಯೊಬ್ಬರ ಪುತ್ರ ಎಂದು ತಿಳಿದುಬಂದಿದೆ.
ಬಂಧಿತ ವ್ಯಕ್ತಿ ಸರ್ಕಾರದ ನಾನಾ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳ ಬಗ್ಗೆ ಅನುಮಾನಾಸ್ಪದವಾಗಿ ಮಾಹಿತಿ ಕಲೆಹಾಕುತ್ತಿದ್ದನು. ಜತೆಗೆ ಆರೋಪಿ ಕೆಲವು ಕಡೆ ತಾನು ಕಂದಾಯ ಸಚಿವರ ಆಪ್ತ ಸಹಾಯಕ ಎಂದು ಹೇಳಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತ ಪ್ರಯಾಣ; ₹7 ಲಕ್ಷ ದಂಡ ವಸೂಲಿ
ಡಿಜಿಪಿ ಕಚೇರಿಯಿಂದ ಮತ್ತು ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಸರ್ಕಾರಿ ಕಚೇರಿಗಳಿಗೆ ಕರೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.