ಬಿಬಿಎಂಪಿ | ನಾಮಫಲಕದಲ್ಲಿ ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ 20,977 ನೋಟಿಸ್‌ ಜಾರಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಈ ಹಿನ್ನೆಲೆ, ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ ಪಾಲಿಕೆ 20,977 ನೋಟಿಸ್‌ ಜಾರಿ ಮಾಡಿದೆ.

“ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಫೆ.28 ರೊಳಗೆ ಕಾನೂನಿನ ನಿಯಮದಂತೆ ಶೇ.60ರಷ್ಟು ಕನ್ನಡ ಬಳಕೆ ಮಾಡಿರಬೇಕು. ಜ.15ರೊಳಗೆ ಸರ್ವೆ ಕಾರ್ಯ ಮುಗಿಸಿ, ಕನ್ನಡ ಬಳಕೆ ಮಾಡದ ವಾಣಿಜ್ಯ ಅಂಗಡಿಗಳಿಗೆ ನೋಟಿಸ್ ನೀಡಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದರು.

ಮುಖ್ಯ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ವಲಯಗಳ ಆರೋಗ್ಯಾಧಿಕಾರಿಗಳು ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ನೀಡುತ್ತಿದ್ದಾರೆ.

Advertisements

“ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಮಳಿಗೆಗಳಿಗೆ ನೋಟಿಸ್ ನೀಡಲಾಗುತ್ತಿದೆ. ಈಗಾಗಲೇ, ಶೇ 80ರಷ್ಟು ಮಾಲೀಕರಿಗೆ ನೋಟಿಸ್‌ ನೀಡಲಾಗಿದ್ದು, ಈ ವಾರದಲ್ಲಿ ಎಲ್ಲರಿಗೂ ನೋಟಿಸ್‌ ತಲುಪುತ್ತದೆ’’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಸೈಯದ್‌ ಸಿರಾಜುದ್ದೀನ್‌ ಮದನಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜನವರಿ 18ರಂದು ‘ಬಿಲ್ಕಿಸ್ ಬಾನು ಜೊತೆ ನಾವಿದ್ದೇವೆ’ ಕಾರ್ಯಕ್ರಮ

“ನಗರದಲ್ಲಿರುವ ಮುಖ್ಯರಸ್ತೆಗಳಲ್ಲಿ ಶೇ.60ರಷ್ಟು ಕನ್ನಡ ಪದ ಬಳಕೆಯ ನಾಮಫಲಕಗಳನ್ನು ಬಳಸಿಲ್ಲ. ಹೀಗಾಗಿ, ಪಾಲಿಕೆ ವಲಯದ ಎಲ್ಲ ರಸ್ತೆ, ವಸತಿ ಪ್ರದೇಶಗಳಲ್ಲಿರುವ ಮಳಿಗೆ, ವಾಣಿಜ್ಯ ಚಟುವಟಿಕೆಯ ಅಂಗಡಿಗಳಿಗೆ ನೋಟಿಸ್ ನೀಡಲಾಗುತ್ತಿದೆ. 15 ದಿನದಲ್ಲಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸುವಂತೆ ಸೂಚಿಸಲಾಗಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X