ಹಾವೇರಿ ಗ್ಯಾಂಗ್ ರೇಪ್ ಪ್ರಕರಣ | ಎಸ್‌ಐಟಿ ತನಿಖೆಗೆ ಆಗ್ರಹಿಸಿ ಜ.20 ರಂದು ಬೃಹತ್ ಪ್ರತಿಭಟನೆ: ಬೊಮ್ಮಾಯಿ

Date:

Advertisements

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದರು.

“ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಪ್ರಕರಣವನ್ನು ಪೊಲೀಸರು ಮುಚ್ಚಿ ಹಾಕುವ ಯತ್ನ ಮಾಡಿದ್ದರು. ಹಾವೇರಿ ಎಸ್ಪಿ, ಹೊಮ್‌ಮಿನಿಸ್ಟರ್ ಅದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಆದರೆ, ಈಗ ಹಾನಗಲ್ ಪೊಲೀಸರನ್ನು ಅವರೇ ಅಮಾನತು ಮಾಡಿದ್ದಾರೆ‌. ಹೀಗಾಗಿ ಪೊಲೀಸರಿಂದ ಲೋಪವಾಗಿರುವುದನ್ನು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದರು.

Advertisements

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವಲ್ಲಿ ರಾಜಕಾರಣ ಬಹಳ ಪಾತ್ರ ವಹಿಸುತ್ತಿದೆ. ಹಾನಗಲ್ ಪೊಲೀಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಆ ಹೆಣ್ಣು ಮಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಎಸ್ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಜನವರಿ 20 ರಂದು ಹಾವೇರಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ. ಸಿಎಂ ಎಸ್ಐಟಿ ತನಿಖೆಗೆ ನಿರಾಕರಿಸಿರುವುದು ಅಪರಾಧ ಮಾಡುವವರಿಗೆ ಪುಷ್ಟಿ ಕೊಟ್ಟಂತೆ ಆಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

ಸಿಎಂಗೆ ಮೋದಿ ಫೋಬಿಯಾ

“ಸಿಎಂ ಸಿದ್ದರಾಮಯ್ಯ ಅವರಿಗೆ ಮೋದಿ ಫೋಬಿಯಾ ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೊದಿ ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ದ ಅನಗತ್ಯ ಆರೋಪ ಮಾಡುತ್ತಾರೆ” ಎಂದು ಕಿಡಿಕಾರಿದರು.

”ಸಿಎಂ ಪುತ್ರ ಯತೀಂದ್ರ ಅವರೇ ಹೇಳಿರುವುದನ್ನು ಕೇಳಿದರೆ, ಕಾಂಗ್ರೆಸ್ ಹೆಚ್ಚು ಸೀಟು ಬಂದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ ಅಂತ ಹೇಳಿದ್ದಾರೆ. ಕಡಿಮೆ ಸೀಟು ಬಂದರೆ ಸಿಎಂ ಸ್ಥಾನ ಹೋಗುವ ಆತಂಕ ಅವರಿಗೆ ಕಾಡುತ್ತಿದೆ. ಅದಕ್ಕಾಗಿ ರಾಜ್ಯಕ್ಕೆ ಮೋದಿ ಬಂದಾಗೊಮ್ಮೆ ಸುಳ್ಳು ದಾಖಲೆಗಳನ್ನು ನೀಡಿ ಜನರ ದಾರಿ ತಪ್ಪಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“15 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಅನುದಾನ ಶೇ 4.7 ನಿಂದ ಶೇ 3.6 ಗೆ ಇಳಿಯಲು ಸಿದ್ದರಾಮಯ್ಯ ಅವರೇ ಕಾರಣ. ಅವರು ಸರಿಯಾಗಿ ರಾಜ್ಯದ ವಸ್ತು ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ. ನಮ್ಮ ಅವಧಿಯಲ್ಲಿಯೂ ಪ್ರವಾಹ ಬಂದಾಗ ಹಿಂದಿನ ಯುಪಿಎ ಸರ್ಕಾರ ಪರಿಹಾರ ನೀಡಿತ್ತಾ? ನಾವು ಕೇಂದ್ರದ ಅನುದಾನಕ್ಕಾಗಿ ಕಾಯದೇ 2,500 ಕೋಟಿ ರೂ. ಪರಿಹಾರ ನೀಡಿದ್ದೆವು. ಕರ್ನಾಟಕದ ಜನರು ನಿಮಗೆ ಮತ ಹಾಕಿದ್ದು, ಒಳ್ಳೆಯ ಆಡಳಿತ ನೀಡಲಿ ಎಂದು ಆದರೆ, ನೀವು ಅವೈಜ್ಞಾನಿಕ ಗ್ಯಾರಂಟಿ ಜಾರಿ ಮಾಡಿ ಆರ್ಥಿಕತೆ ಹಳಿ ತಪ್ಪಿಸುತ್ತಿದ್ದೀರಿ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X