ರಾಮಮಂದಿರ ಉದ್ಘಾಟನೆ | ರಾಜ್ಯದಲ್ಲಿಲ್ಲ ರಜೆ; ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ

Date:

Advertisements

ಅಯೋಧ್ಯೆಯಲ್ಲಿ ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ಯ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಲ್ಲಿಯೂ ರಜೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಅಂದು ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ನಡುವೆ, ಖಾಸಗಿ ಶಾಲಾ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ಸಮಾರಂಭವನ್ನು ಲೈವ್-ಸ್ಟ್ರೀಮ್ ಮೂಲಕ ತೋರಿಸಲು ಯೋಜಿಸಿವೆ ಎಂದು ತಿಳಿದುಬಂದಿದೆ.

“ನಾವು ಜನವರಿ 22ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಿಯಾದರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಪರಿಸ್ಥಿತಿ ಇದ್ದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಅವಕಾಶ ಇತ್ತದೆ” ಎಂದು ಶಿಕ್ಷಣ ಇಲಾಖೆಯ ಅದಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಜೆ ಇರುವುದಿಲ್ಲವೆಂದು ಸ್ಪಷ್ಟವಾದ ಬಳಿಕ, ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ ಇನ್ ಕರ್ನಾಟಕ (ಕೆಎಎಮ್‌ಎಸ್) ತನ್ನ ಎಲ್ಲ ಸದಸ್ಯ ಶಾಲೆಗಳಿಗೆ ರಜೆ ಘೋಷಿಸದಂತೆ ಸೂಚಿಸಿದೆ. ಅಲ್ಲದೆ, ಉದ್ಘಾಟನಾ ಸಮಾರಂಭವನ್ನು ಶಾಲೆಗಳಲ್ಲಿ ಲೈವ್-ಸ್ಟ್ರೀಮ್ ಮೂಲಕ ವಿದ್ಯಾರ್ಥಿಗಳಿಗೆ ತೋರಿಸುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

Advertisements

ಕೆಎಎಂಎಸ್‌ನ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ನಿರ್ದೇಶನ ಹೊರಡಿಸಿದ್ದು, “ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭವು ಇಡೀ ದೇಶದ ಗಮನ ಸೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘದ ಎಲ್ಲ ಸದಸ್ಯರು ತಮ್ಮ ತಮ್ಮ ಶಾಲೆಗಳಲ್ಲಿ ಒಂದೂವರೆ ಗಂಟೆಗಳ ಕಾಲ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಬೇಕು” ಎಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಅಯೋಧ್ಯೆ ರಾಮಮಂದಿರ ಉದ್ಘಾಟನೆ | ಜ.22ರಂದು ಅರ್ಧ ದಿನ ರಜೆ ಘೋಷಣೆ

“ಆಯಾ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮವನ್ನು ರಾಜಕೀಯವನ್ನು ಹೊರಗಿಡುವ ರೀತಿಯಲ್ಲಿ ನಡೆಸಬೇಕು. ಐತಿಹಾಸಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂದರ್ಭದಲ್ಲಿ ರಾಮ ಜನ್ಮಭೂಮಿಯ ಮಹತ್ವವನ್ನು ತಿಳಿಸಬೇಕು. ರಜೆ ನೀಡುವುದು ಸರಿಯಾದ ಮಾರ್ಗವಲ್ಲ. ರಜೆ ನೀಡುವುದರಿಂದ ವಿದ್ಯಾರ್ಥಿಗಳು ಒಟ್ಟಿಗೆ ಐತಿಹಾಸಿಕ ಕ್ಷಣವನ್ನು ವೀಕ್ಷಿಸುವ ಅನುಭವವನ್ನು ಕಳೆದುಕೊಳ್ಳುತ್ತಾರೆ ಎಂಬುದು ನಮ್ಮ ಅಭಿಪ್ರಾಯವಾಗಿದೆ,” ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಶ್ರೀರಾಮ ಸೇನೆಯ ಮುಖಂಡರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಜನವರಿ 22 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಬಿಜೆಪಿ ಅಧಿಕಾರಿದಲ್ಲಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ, ಗೋವಾ, ಛತ್ತೀಸ್‌ಗಢ ಮತ್ತು ಹರಿಯಾಣ ಸರ್ಕಾರಗಳು ಜ.22ರಂದು ಶಾಲೆಗಳಿಗೆ ರಜೆ ಘೋಷಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X