- ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಕಾರು ದುರ್ಬಳಕೆ ಆರೋಪ
- ಜೆಡಿಎಸ್ ಅಭ್ಯರ್ಥಿಗೆ ಸೇರಿದ ₹9 ಲಕ್ಷ ನಗದು ವಶ
ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಅವರ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಡೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಆಗಿರುವ ಬೆಳ್ಳಿ ಪ್ರಕಾಶ್ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಕೂಡ ಆಗಿದ್ದಾರೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಡಿಸಿಸಿ ಬ್ಯಾಂಕ್ ವಾಹನ ಬಳಸಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಜೆಡಿಎಸ್ ಅಭ್ಯರ್ಥಿಯ ₹9 ಲಕ್ಷ ನಗದು ಜಪ್ತಿ
ಕಡೂರು ತಾಲೂಕಿನ ಬಸವನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ್ ಅವರಿಗೆ ಸೇರಿದ್ದು, ಎನ್ನಲಾದ ₹9 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ದೇವೇಗೌಡರ ʼಮಾನಸ ಪುತ್ರʼ ವೈ ಎಸ್ ವಿ ದತ್ತ ಮರಳಿ ಜೆಡಿಎಸ್ ಗೂಡಿಗೆ
ಚಿಕ್ಕಮಗಳೂರು ತಾಲೂಕಿನ ಜಾಗರ ಸಮೀಪದ ಸರ್ಪೈಸ್ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ₹4,50,000 ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಉಡೇವ ಗ್ರಾಮದ ಸರ್ಪೈಸ್ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ₹7,94,000 ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.