ವಿಪ್ ಉಲ್ಲಂಘಿಸಿ ಅನರ್ಹಗೊಂಡವರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು: ಹೈಕೋರ್ಟ್‌

Date:

Advertisements

ಪಕ್ಷ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರೆ, ಅಂತಹವರು ನಂತರದ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ನಿರ್ಬಂಧವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭೆಯಲ್ಲಿ ವಿಪ್‌ ಉಲ್ಲಂಘಿಸಿದ ಆರೋಪದ ಮೇಲೆ ನಗರಸಭೆ ಸದಸ್ಯ ಮೊಹಮ್ಮದ್ ಶಫಿಕ್ ಅವರನ್ನು ಅನರ್ಹಗೊಳಿಸಲಾಗಿತ್ತು. ಅವರು ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ ಮುನೇಗೌಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, “ವಿಪ್‌ ಉಲ್ಲಂಘಿಸಿ ಅನರ್ಹರಾದವರು, ನಂತರ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇರುವುದಿಲ್ಲ” ಎಂದು ಹೇಳಿದೆ.

Advertisements

ಸಂವಿಧಾನದ ಕಲಂಗಳನ್ನು ಉಲ್ಲೇಖಿಸಿರುವ ನ್ಯಾಯಾಧೀಶರು, “ಸಂವಿಧಾನದ ಪರಿಚ್ಛೇದ 191(1)ರ ಪ್ರಕಾರ ಅನರ್ಹಗೊಂಡರೆ ಅವರು ಮುಂದಿನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇರುವುದಿಲ್ಲ. ಆದರೆ, 191(2)ರ 10ನೇ ಅನುಸೂಚಿ ಅಡಿಯಲ್ಲಿ ಅನರ್ಹಗೊಂಡಿದ್ದರೆ, ಆ ಅನರ್ಹತೆ ಸದಸ್ಯತ್ವಕ್ಕೆ ಮಾತ್ರ ಅನ್ವಯವಾಗಲಿದೆ. ಅಂತಹ ವ್ಯಕ್ತಿ ಮುಂದಿನ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಬಹುದು. ಈ ಬಗ್ಗೆ, ಶ್ರೀಮಂತ್ ಬಾಳಾಸಾಹೇಬ್ ಪಾಟೀಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ” ಎಂದು ವಿವರಿಸಿದ್ದಾರೆ. ಶಫಿಕ್ ಅವರ ಸ್ಪರ್ಧೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X