ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ 50 ದಿನ ಪೆರೋಲ್

Date:

Advertisements

ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಅಪರಾಧದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಡೇರಾ ಸಚ್ಚಾ ಸೌಧ ಸಂಸ್ಥೆಯ ಗುರುಮೀತ್ ರಾಮ್ ರಹೀಮ್ ಸಿಂಗ್‌ನಿಗೆ 50 ದಿನಗಳು ಪೆರೋಲ್ ನೀಡಲಾಗಿದೆ. ಕಳೆದ ವರ್ಷದ ನವೆಂಬರ್‌ನಲ್ಲಿ ಈತ 21 ದಿನಗಳ ಪೆರೋಲ್ ಪಡೆದು ಆಚೆ ಬಂದಿದ್ದ.

ಇದಲ್ಲದೆ ಕಳೆದ ವರ್ಷ ಈತ ಮೂರು ಬಾರಿ ಪೆರೋಲ್‌ ಮೇಲೆ ಹೊರಗಡೆ ಬಂದಿದ್ದ. 56 ವರ್ಷದ ರಾಮ್ ರಹೀಮ್ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಪ್ರಸಿದ್ಧಿ ಹೊಂದಿರುವ ಧರ್ಮಗುರುವಾಗಿದ್ದಾನೆ. ಈತ ವಿವಿಧ ಕಾರಣಗಳಿಂದ ಹಲವು ಬಾರಿ ಪೆರೋಲ್ ಪಡೆದು ಸೆರೆಮನೆಯಿಂದ ಆಚೆ ಬಂದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

Advertisements

2017ರಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಅಪರಾಧಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರದಲ್ಲಿ ಪತ್ರಕರ್ತರೊಬ್ಬರನ್ನು ಒಳಗೊಂಡು ಎರಡು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಡೇರಾ ಸಚ್ಚಾ ಸೌಧ ಸಂಸ್ಥೆಯ ವ್ಯವಸ್ಥಾಪಕರನ್ನು ಕೊಲೆಯ ಮುಖ್ಯ ಪಿತೂರಿಗೆ ಗುರುಮೀತ್ ರಾಮ್ ರಹೀಮ್ ಸಿಂಗ್‌ನಿಗೆ 2021ರಲ್ಲಿ ಶಿಕ್ಷೆ ವಿಧಿಸಲಾಗಿತ್ತು. 16 ವರ್ಷದ ಪತ್ರಕರ್ತರೊಬ್ಬರ ಕೊಲೆಗೆ ಸಂಬಂಧಿಸಿದಂತೆ 2019ರಲ್ಲಿ ರಹೀಮ್ ಸಿಂಗ್‌ ಸೇರಿ ಮೂವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿತ್ತು.

ಹರಿಯಾಣದ ಕೈದಿಗಳ ಉತ್ತಮ ನಡವಳಿಕೆ(ತಾತ್ಕಾಲಿಕ ಬಿಡುಗಡೆ) ಕಾಯ್ದೆ, 2022 ಕಾಯ್ದೆಯಂತೆ ಶಿಕ್ಷೆಗೊಳಗಾದ ಅಪರಾಧಿಗಳಿಗೆ ನಿಯಮಿತವಾಗಿ ಪೆರೋಲ್ ನೀಡಲಾಗುತ್ತದೆ. ಆದಾಗ್ಯೂ, ಹಲವು ಕೊಲೆ ಮಾಡಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಅಥವಾ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಪೆರೋಲ್‌ಗೆ ಅರ್ಹರಾಗುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X