ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು ಘಟಕ ಆಗ್ರಹಿಸಿದೆ.
ಬಿಎಸ್‌ಪಿ ತಾಲೂಕು ಘಟಕದ ಪದಾಧಿಕಾರಿಗಳು ಬಸವಕಲ್ಯಾಣ ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ತಾ.ಪಂ. ಇಒ ಮಹಾದೇವ ಬಾಬುಳಗಿ ಅವರಿಗೆ ಸಲ್ಲಿಸಿದರು.
“ತಾಲೂಕಿನ ಮಂಗಳೂರು, ಶಿವರಾಮ ತಾಂಡಾ, ಖೇರ್ಡಾ(ಬಿ), ಹಿರೇನಾಗಾಂವ, ನಾರಾಯಣಪುರ, ಕಿಟ್ಟಾ, ಗುತ್ತಿ ಗ್ರಾಮಗಳಲ್ಲಿನ ಜೆಜೆಎಂ ಕಾಮಗಾರಿ ಕುಂಟುತ್ತ ಸಾಗಿದೆ. ಆದ್ದರಿಂದ ಸಂಬಂಧಿತ ಜೆಇ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕೆಲಸ ಪೂರ್ಣಗೊಳ್ಳದಿದ್ದರೂ ಈ ಕಾರ್ಯಕ್ಕೆ ಕೆಲ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಸಹಕಾರ ನೀಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.
“ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಕಿಟ್ಟಾ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ, ಕಂಪೌಂಡ್ ಅಡುಗೆ ಕೋಣೆ ಗಾರ್ಡನ್ ನಿರ್ಮಿಸಬೇಕು. ತಾಲೂಕು ಪಂಚಾಯತ್ ಕಚೇರಿಯಲ್ಲಿ ಶೌಚಾಲಯ ನಿರ್ಮಿಸುವಂತೆ” ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೆೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ
ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಫುಲೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್, ಮಹಾದೇವ ಗಾಯಕವಾಡ, ದತ್ತು ಸುಂಠಾಣೆ, ಚೇತನ ಕಾಡೆ, ವಿಷ್ಣುಕಾಂತ ಸೂರ್ಯವಂಶಿ, ಅಶೋಕ ಶಿಂಧೆ, ರೋಷನ ಜವಾಹರ, ಸಚಿನ್ ಕಾಂಬಳೆ, ಸಂದೀಪ ಮತ್ತಿತರರು ಉಪಸ್ಥಿತರಿದ್ದರು