ಕಟ್ಟಡ ನಿರ್ಮಾಣ ನಕ್ಷೆಗೆ ಪ್ರಮಾಣೀಕೃತ ವಾಸ್ತುಶಿಲ್ಪಿಗಳ ಸ್ವಯಂ ದೃಢೀಕರಣ ವ್ಯವಸ್ಥೆ ಶೀಘ್ರ ಜಾರಿ: ಡಿಸಿಎಂ

Date:

Advertisements

“ಪ್ರಮಾಣೀಕೃತ ವಾಸ್ತುಶಿಲ್ಪಿಗಳಿಂದ ಕಟ್ಟಡ ನಿರ್ಮಾಣ ನಕ್ಷೆಯ ಸ್ವಯಂ ದೃಢೀಕರಣ ವ್ಯವಸ್ಥೆ ಜಾರಿಗೆ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೋ ಆರ್ಟ್ ಕೇಂದ್ರದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಟಿರಿಯರ್ ಡಿಸೈನ್ ಶುಕ್ರವಾರ ಏರ್ಪಡಿಸಿದ್ದ ‘ಡಿಸೈನೂರು’ ಹಬ್ಬದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಪ್ರಮಾಣಿಕೃತ ಲೆಕ್ಕಪರಿಶೋಧಕರು ಇರುವಂತೆ, ಪ್ರಮಾಣೀಕೃತ ಕಟ್ಟಡ ವಾಸ್ತುಶಿಲ್ಪಿಗಳಿಗೆ ನಿವೇಶನಗಳ ಕಟ್ಟಡಗಳ ನಕ್ಷೆ ಸ್ವಯಂ ದೃಢೀಕರಿಸುವ ಅವಕಾಶ ನೀಡಲಾಗುವುದು. ಇದರಿಂದ ನಕ್ಷೆ ಮಂಜೂರಿಗೆ ಜನ ಪದೇಪದೇ ಬಿಬಿಎಂಪಿಯ ಬಾಗಿಲು ತುಳಿಯುವುದು ತಪ್ಪುತ್ತದೆ. ಅಧಿಕಾರಿಗಳ ಕಿರುಕುಳ ಸೇರಿದಂತೆ ಕೆಲಸ ವಿಳಂಬವಾಗುವುದೂ ತಪ್ಪುತ್ತದೆ. ಈ ನೆಲದ ಕಾನೂನಿನ ಅರಿವಿರುವ ಕಟ್ಟಡ ವಾಸ್ತುಶಿಲ್ಪಿಗಳು ಸರ್ಕಾರದ ನಿರ್ಣಯಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಜನಸಾಮಾನ್ಯರು ಮನೆ ಕಟ್ಟಲು ಪರದಾಡುವ ಸ್ಥಿತಿ ಈ ಕಾನೂನಿನಿಂದ ಪರಿಹಾರವಾಗಲಿದೆ. ನೀವೆಲ್ಲಾ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೀರಿ ಎನ್ನುವ ನಂಬಿಕೆ ನನಗಿದೆ” ಎಂದರು.

“ಎಷ್ಟು ಅಳತೆಯ ನಿವೇಶನಗಳ ಕಟ್ಟಡಗಳಿಗೆ ಇದು ಅನ್ವಯ ಆಗಲಿದೆ ಎಂಬುದರ ಬಗ್ಗೆ ಒಂದೆರಡು ದಿನದಲ್ಲಿ ವಿವರ ನೀಡಲಾಗುವುದು. ಕಟ್ಟಡ ಮತ್ತು ಒಳಾಂಗಣ ವಿನ್ಯಾಸ ಕ್ಷೇತ್ರಕ್ಕೆ ಬೆಂಗಳೂರು ಮಟ್ಟದಲ್ಲಿ ಸ್ಪರ್ಧೆಯಿಲ್ಲ. ಬದಲಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಏರ್ಪಟ್ಟಿದೆ. ನಮಗೆಲ್ಲರಿಗೂ ನಾವು ಮಾಡುವ ಕೆಲಸದ ಬಗ್ಗೆ ಗೌರವ ಮತ್ತು ಹೆಮ್ಮೆ ಇರಬೇಕು. ನಿರ್ಮಾಣ ಮತ್ತು ವಿನ್ಯಾಸ ಕ್ಷೇತ್ರದ ತಂತ್ರಜ್ಞಾನ ಸಾಕಷ್ಟು ಬೆಳವಣಿಗೆ ಕಂಡಿದೆ” ಎಂದು ಹೇಳಿದರು.

Advertisements

“ಈ ಕ್ಷೇತ್ರಕ್ಕೆ ಸೃಜನಶೀಲ ಮತ್ತು ಹೊಸ ಆಲೋಚನೆಗಳನ್ನು ಹೊಂದಿರುವ ಕೌಶಲ್ಯ ಬೇಕಾಗುತ್ತದೆ. ತಂತ್ರಜ್ಞಾನ ಬೆಳೆಯುತ್ತಿರುವ ಕಾರಣ ಪ್ರತಿ ದಿನವೂ ಈ ಕ್ಷೇತ್ರದಲ್ಲಿ ಸವಾಲುಗಳು ಎದುರಾಗುತ್ತವೆ. ಹೆಚ್ಚು, ಹೆಚ್ಚು ಕಲಿತಷ್ಟು ಕೆಲಸದ ಆಯಸ್ಸು ಹೆಚ್ಚುತ್ತದೆ. ಸೌಂದರ್ಯ ವರ್ಧಕ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚು ಬೇಡಿಕೆ ಇದೆ ಎಂದು ನನ್ನ ಮಗಳು ಆಗಾಗ ಹೇಳುತ್ತಿರುತ್ತಾಳೆ. ಏಕೆಂದರೆ, ಸೌಂದರ್ಯ ಪ್ರಜ್ಞೆ ಎನ್ನುವುದು ಜನರ ತಲೆಯಲ್ಲಿ ಕುಳಿತಿದೆ. ಸಾಮಾನ್ಯ ಕಟ್ಟಡ ನಿರ್ಮಾಣಕ್ಕಿಂತ ಶೇ.10 ರಷ್ಟು ಹೆಚ್ಚುವರಿ ವೆಚ್ಚ ಕಟ್ಟಡ ವಿನ್ಯಾಸ ಮತ್ತು ಒಳಾಂಗಣ ವಿನ್ಯಾಸಕ್ಕೆ ಖರ್ಚಾಗುತ್ತದೆ. ಇದರ ಬಗ್ಗೆ ಗ್ರಾಹಕರಿಗೆ ಮನವರಿಕೆ ಮಾಡುವುದು ನಿಮ್ಮ ಕೆಲಸ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿದ್ದಾರೆ ಅತಿ ಹೆಚ್ಚು ನಕಲಿ ವೈದ್ಯರು: ರೋಗಿಗಳ ಜೀವದ ಜತೆಗೆ ಚೆಲ್ಲಾಟ

“ಬೆಂಗಳೂರು ದಿನೇ, ದಿನೇ ಬೆಳೆಯುತ್ತಿದೆ. ಭಾರತವನ್ನು ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಕಟ್ಟಡ ವಿನ್ಯಾಸದಲ್ಲೇ ಅತ್ಯಂತ ಸುಂದರ ಕಟ್ಟಡವಾದ ವಿಧಾನಸೌಧವನ್ನು ನಿರ್ಮಾಣ ಮಾಡಿದ್ದು, ಕೆಂಗಲ್ ಹನುಮಂತಯ್ಯನವರು. ಇತರೇ ಸುಂದರ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು ಬ್ರಿಟಿಷರು. ಮುಂದಿನ ದಿನಗಳಲ್ಲಿ ಕಟ್ಟಡ ವಿನ್ಯಾಸಕಾರರಿಗೆ ಹೆಚ್ಚು, ಹೆಚ್ಚು ಕೆಲಸ ದೊರೆಯುವಂತಾಗಲಿ. ನಿಮ್ಮ ಕೆಲಸದ ವಿಚಾರದಲ್ಲಿ ಯಾವುದಾದರೂ ತೊಂದರೆ ಉಂಟಾದರೆ ನೇರವಾಗಿ ನನ್ನ ಭೇಟಿಯಾಗಿ ಸಮಸ್ಯೆ ತಿಳಿಸಬಹುದು. ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X