ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Date:

Advertisements

ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ನಾಲ್ಕರ್‌ ಕ್ರಾಸ್‌ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಈವರೆಗೆ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿ 8ರಂದು ನಾಲ್ಕರ್ ಕ್ರಾಸ್‌ ಬಳಿಯ ಹೋಟೆಲ್‌ನಲ್ಲಿ ಜೋಡಿಗಳು ತಂಗಿದ್ದರು. ಈ ವೇಳೆ, ಅವರ ಕೊಠಡಿಗೆ ನುಗ್ಗಿದ ಯುವಕರ ಗುಂಪು ಅನೈತಿಕ ಪೊಲೀಸ್‌ಗಿರಿ ನಡೆಸಿತ್ತು. ಆ ಗುಂಪು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಸಂತ್ರಸ್ತ ಮಹಿಳೆ ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದರು. ಬಳಿಕ, ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಈ ಹಿಂದೆ, ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ, ಅಕ್ಕಿಆಲೂರಿನ ಮೀನು ವ್ಯಾಪಾರಿ ಇಬ್ರಾಹಿಂ ಖಾದರ್‌ ಗೌಸ್‌ (27) ಮತ್ತು ಕಾರು ಚಾಲಕ ತೌಸಿಫ್‌ ಅಹಮದ್‌ ಚೌಟಿ ಅಲಿಯಾಸ್‌ ಕಾಟ್ಲ (25) ಎಂಬ ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

Advertisements

ಪ್ರಕರಣದ ಮತ್ತೋರ್ವ ಆರೋಪಿ ಮಹಮ್ಮದ್ ಸೈಫ್‌ ಸಾವಿಕೇರಿ ಎಂಬಾತನಿಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಿಕಿತ್ಸೆ ಪೂರ್ಣಗೊಂಡ ಬಳಿಕ ಆತನನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಬೇಕೆಂಬ ಆಗ್ರಹಗಳೂ ಕೇಳಿ ಬಂದಿವೆ. ಅಲ್ಲದೆ, ಪ್ರಕರನದಲ್ಲಿ  ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದ ಮೇಲೆ ಹಾನಗಲ್‌ ಪೊಲೀಸ್‌ ನಿರೀಕ್ಷಕ ಎಸ್‌.ಆರ್‌ ಶ್ರೀಧರ್‌ ಮತ್ತು ಕಾನ್‌ಸ್ಟೆಬಲ್‌ ಇಲಿಯಾಜ್‌ ಶೇಟಸನಾಡಿ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X