ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ: ಸರ್ಕಾರದಿಂದ ಸುತ್ತೋಲೆ

Date:

Advertisements

ಸರ್ಕಾರ ನಿಗದಿ ಪಡಿಸಿದ ಕೆಲಸಗಳನ್ನು ಹೊರತುಪಡಿಸಿ ಪೌರಕಾರ್ಮಿಕರನ್ನು ಬೇರೆ ಕೆಲಸಗಳಿಗೆ ನಿಯೋಜಿಸುವಂತಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುತ್ತಿರುವ ಬಗ್ಗೆ ನಿರ್ದೇಶನಾಲಯಕ್ಕೆ ಹಲವಾರು ದೂರುಗಳು ಬಂದಿವೆ. ಈ ಹಿನ್ನೆಲೆ,  ಪೌರಾಡಳಿತ ನಿರ್ದೇಶನಾಲಯ ಈ ಆದೇಶ ಹೊರಡಿಸಿದೆ.

ಒಂದು ವೇಳೆ ಸರ್ಕಾರದ ಆದೇಶದ ಮೇರೆಗೂ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ, ಬೇರೆ ಕೆಲಸಗಳಿಗೆ ನಿಯೋಜನೆ ಮಾಡಿದವರಿಗೆ ಮತ್ತು ಅವರಿಂದ ಸೇವೆ ಪಡೆದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಇಲಾಖೆ ಎಚ್ಚರಿಕೆ ನೀಡಿದೆ. ಹಾಗೆಯೇ, ಇತರೆ ಯಾವುದೇ ಅನ್ಯ ಕೆಲಸಗಳಿಗೆ ನಿಯೋಜಿಸದಂತೆ ಇಲಾಖೆ ಕಟ್ಟುನಿಟ್ಟಾಗಿ ಸೂಚಿಸಿದೆ.

Advertisements

ಪೌರಕಾರ್ಮಿಕರನ್ನು ಅವರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೆ ಕೆಲಸಗಳಿಗೆ ನಿಯೋಜಿಸುವುದು ನಿಯಮಬಾಹಿರವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಹಣ – ರಕ್ತ ಚಲನೆಯಲ್ಲಿದ್ದರೆ, ವ್ಯಕ್ತಿ ಮತ್ತು ಸಮಾಜ ಆರೋಗ್ಯವಾಗಿರುತ್ತದೆ: ಡಿ.ಕೆ ಶಿವಕುಮಾರ್

ಒಂದು ವೇಳೆ ಪೌರಕಾರ್ಮಿಕರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೇ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುವುದು ಕಂಡು ಬಂದಲ್ಲಿ ಅಥವಾ ನಿರ್ದೇಶನಾಲಯಕ್ಕೆ ದೂರು ಸ್ವೀಕೃತವಾದಲ್ಲಿ, ಅನ್ಯ ಕಾರ್ಯಗಳಿಗೆ ನಿಯೋಜಿಸಿದ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಯನ್ನು ಮತ್ತು ಅವರ ಸೇವೆಯನ್ನು ಪಡೆಯುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X