ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ₹26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೀನ್ಯಾ ಮೂಲದ 36 ವರ್ಷದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪ್ರವಾಸಿ ವೀಸಾ ಮೇರೆಗೆ ಕೀನ್ಯಾ ಮೂಲದ ಆ ಮಹಿಳೆ ದೇಶಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.
ಮಹಿಳೆ ಲಗೇಜ್ ಬ್ಯಾಗ್‌ನಲ್ಲಿ ಕೊಕೇನ್ ಅನ್ನು ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗುತ್ತಿದ್ದ ವೇಳೆ ಅಧಿಕಾರಿಗಳ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾಳೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ 8 ವಲಯಗಳಲ್ಲಿ ಮರಗಳ ಗಣತಿಗೆ ಮುಂದಾದ ಬಿಬಿಎಂಪಿ
ಅಕ್ರಮವಾಗಿ ಸಾಗಿಸುತ್ತಿದ್ದ 2.6 ಕೆಜಿ ಕೊಕೇನ್ ಜತೆಗೆ ಡಿಆರ್‌ಐ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ಬೆಂಗಳೂರಿನ ಡಿಆರ್‌ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.