ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಗೆಳತಿ ಯೋಜನೆ ಅಡಿಯಲ್ಲಿ ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಗೆಳತಿ ಯೋಜನೆಯಡಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಯೋಜನೆಯಡಿಯಲ್ಲಿ ಪ್ರತಿ ಫಲಾನುಭವಿಗೆ ಘಟಕ ವೆಚ್ಚ ₹5 ಲಕ್ಷ (ಸಾಲ ₹2.5 ಲಕ್ಷ ಹಾಗೂ ಸಹಾಯಧನ ₹2,5 ಲಕ್ಷ) ವರೆಗೆ ನೀಡಲಾಗುತ್ತಿದೆ.
ಗೆಳತಿ ಯೋಜನೆಯಡಿ ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು- 560011 ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಛೇರಿ ಅವಧಿಯಲ್ಲಿ ಜನವರಿ 31 ರೊಳಗೆ ಸದರಿ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯಲು ಸಹಕರಿಸಿದ ನಾಲ್ವರು ಬ್ಯಾಂಕ್ ಅಧಿಕಾರಿಗಳ ಬಂಧನ
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.