ಹಾವೇರಿ ಗ್ಯಾಂಗ್ ರೇಪ್ ಪ್ರಕರಣ | ಎಸ್‌ಐಟಿ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Date:

Advertisements

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಎಸ್‌ಐಟಿ ತನಿಖೆಗೆ ಆಗ್ರಹಿಸಿ ಹಾವೇರಿ ಎಸ್‌ಪಿ ಕಚೇರಿ ಮುಂದೆ ಶನಿವಾರ ಬಿಜೆಪಿ ನಾಯಕರು ಬೃಹತ್‌ ಪ್ರತಿಭಟನೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ಬದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ರಾಜ್ಯದಲ್ಲಿ ಜಂಗಲ್ ರಾಜ್ ಇದೆ. ತುಘಲಕ್ ದರ್ಬಾರ್ ಇದೆ. ತಾಲಿಬಾನ್ ಶಕ್ತಿಗಳು ತಲೆ ಎತ್ತುತ್ತಿವೆ. ಅತ್ಯಾಚಾರ ಆದ ನಾಲ್ಕು ದಿನದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾನಗಲ್ ಪೊಲೀಸರು ಕೇಸ್ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ದುಷ್ಟರ ಜೊತೆಗೆ ಪೊಲೀಸರು ಸೇರಿದ್ದಾರೆ. ನಾಚಿಕೆಯಾಗಬೇಕು ಇವರಿಗೆ” ಎಂದು ವಾಗ್ದಾಳಿ ನಡೆಸಿದರು.

Advertisements

“ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲಿಸರ‌ ಮೂಲಕ ಸಂತ್ರಸ್ಥೆಗೆ ಆಮಿಷವೊಡ್ಡಿದ್ದರು. ಪಿಎಸ್‌ಐ ಎಲ್ಲ ವ್ಯವಹಾರ ಮಾಡಿದ್ದು, ಪಿಎಸ್‌ಐ ಅವರನ್ನು ಸಸ್ಪೆಂಡ್ ಮಾಡಲಿಲ್ಲ. ಅಮಾಯಕರನ್ನು ಬಂಧಿಸಿ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ನಂಬರ್ ತೋರಿಸುತ್ತಿದ್ದಾರೆ. ಅಲ್ಪಸಂಖ್ಯಾತರ ರಕ್ಷಣೆ ನಮ್ಮಿಂದ ಮಾತ್ರ ಸಾಧ್ಯ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಈಗ ಅಲ್ಪಸಂಖ್ಯಾತರ ರಕ್ಷಣೆ ಮಾಡಿ ನೋಡೋಣ” ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟು ಹೋಗಿದೆ. ನೈತಿಕ ಪೊಲೀಸ್‌ಗಿರಿಗೆ ಅವಕಾಶ ಕೊಡುವುದಿಲ್ಲ ಅಂತ ಮುಖ್ಯಮಂತ್ರಿ ಹೇಳುತ್ತಾರೆ. ನೈತಿಕ ಪೊಲಿಸ್‌ಗಿರಿ ತಡೆಯಲು ವಿಶೇಷ ಘಟಕ ಸ್ಥಾಪಿಸುವುದಾಗಿ ಹೇಳುತ್ತಾರೆ. ಎಲ್ಲಿದೆ ನಿಮ್ಮ‌ ಸೆಲ್, ಸಿದ್ದರಾಮಯ್ಯನವರ ಸೆಲ್ ಡೌನ್ ಆಗಿದೆ. ಒಬ್ಬ ಹೆಣ್ಣು ಮಗಳನ್ನ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಅಲ್ಪಸಂಖ್ಯಾತರನ್ನ ಏನು ರಕ್ಷಣೆ ಮಾಡುತ್ತೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪೊಲೀಸ್ ಸ್ಟೇಷನ್ ಸೆಟ್ಲಮೆಂಟ್ ಸೆಂಟರ್ ಆಗಿವೆ. ಪೊಲೀಸರು ಇದನ್ನು ಮುಚ್ಚಿ ಹಾಕಿದ್ದಾರೆ. ಸಂತ್ರಸ್ತೆಯ ಆರೋಗ್ಯ ತಪಾಸಣೆ ಮಾಡಲಿಲ್ಲ. ಸಿಎಂಗೆ ಮುಖಭಂಗವಾಗುತ್ತದೆ ಎಂದು ಸಂತ್ರಸ್ಥೆಯನ್ನು ಶಿರಸಿಗೆ ಶಿಫ್ಟ್‌ ಮಾಡಿದ್ದಾರೆ. ಸರಕಾರವೇ ಸಂತ್ರಸ್ತೆಗೆ ಚಿಕಿತ್ಸೆ ಕೊಡಿಸಬೇಕು” ಎಂದು ಆಗ್ರಹಿಸಿದರು.

ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, “ಈ ಸರ್ಕಾರ ಬಂದ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಮಂಗಳೂರಲ್ಲಿ ಕುಕ್ಕರ್ ಬ್ಲಾಸ್ಟ್ ಆದಾಗ ಡಿ ಕೆ ಶಿವಕುಮಾರ್ ಅವರು ಮುಸಲ್ಮಾನರು ನಮ್ಮ ಬ್ರದರ್ಸ್, ಸಿಸ್ಟ‌ರ್ ಅಂದಿದ್ದರು. ‌ ಎಲ್ಲಪ್ಪ ನಿನ್ನ ಬ್ರದರ್ ಸಿಸ್ಟರ್‌ಗಳು. ರಾಜ್ಯದಲ್ಲಿ ಅತ್ಯಾಚಾರ ದಿನನಿತ್ಯ ನಡೆಯುತ್ತಿದೆ. ಹಾವೇರಿ ಜಿಲ್ಲೆಯಲ್ಲಿ 6 ತಿಂಗಳಲ್ಲಿ 7 ರೇಪ್ ಆಗಿದೆ. ಇದೆ ಗ್ಯಾಂಗ್ ಸಕ್ರಿಯವಾಗಿದೆ. ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆಯಾ?” ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X