ಉರಿ-ನಂಜೇಗೌಡ ವಿವಾದ | ನಿರ್ಮಲಾನಂದನಾಥ ಸ್ವಾಮಿಗೆ ಸೆಡ್ಡು ಹೊಡೆದ ಸಿ ಟಿ ರವಿ

Date:

Advertisements
  • ನಿರ್ಮಲಾನಂದ ಶ್ರೀಗಳಿಗೆ ಮನವರಿಕೆ ಮಾಡಿಕೊಡುತ್ತೇವೆ
  • ದಾಖಲೆಗಳನ್ನು ತೆಗೆದುಕೊಂಡು ಮಠಕ್ಕೆ ಹೋಗುತ್ತೇವೆ

ಉರಿಗೌಡ – ನಂಜೇಗೌಡ ವಿಚಾರದಲ್ಲಿ ಬಿಜೆಪಿ ನಾಯಕರು ಸುಮ್ಮನಿರುವಂತೆ ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ ಎಚ್ಚರಿಕೆ ನೀಡಿದ್ದರು. ಅದಾದ ಬಳಿಕ ಬಿಜೆಪಿ ನಾಯಕರು ಒಂದು ಮಟ್ಟಿಗೆ ತಣ್ಣಗಾಗಿದ್ದರು. ಆದರೆ, ಇದೀಗ ನಿರ್ಮಲಾನಂದನಾಥ ಸ್ವಾಮಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಸೆಡ್ಡು ಹೊಡೆದಿದ್ದಾರೆ.

ಇತಿಹಾಸದ ಪೂರ್ಣ ದಾಖಲೆಗಳು ಲಭ್ಯವಿಲ್ಲದ ವಿಚಾರಗಳ ಮೇಲೆ ನಾವು ಮಾತನಾಡುವುದು ಅಥವಾ ಆ ವಿಚಾರವನ್ನು ಬೆಳೆಸುವಂತಹ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದು ನಿರ್ಮಲಾನಂದನಾಥ ಸ್ವಾಮಿ ಹೇಳಿದ್ದರು. ಆದರೆ, ಉರಿ-ನಂಜೇಗೌಡ ವಿವಾದ ಸದ್ಯಕ್ಕೆ ನಿಲ್ಲುವ ಯಾವ ಮುನ್ಸೂಚನೆಯೂ ಕಾಣಿಸುತ್ತಿಲ್ಲ.

ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಾತನಾಡಿದ ಸಿ ಟಿ ರವಿ, “ಉರಿಗೌಡ-ನಂಜೇಗೌಡ ಕಾಲ್ಪನಿಕ ಕಥೆಗಳಲ್ಲ. ಅವರ ಬಗ್ಗೆ ಜವರೇಗೌಡರು ಸುವರ್ಣ ಮಂಡ್ಯ ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಿರ್ಮಲಾನಂದನಾಥ ಶ್ರೀಗಳಿಗೆ ವಾಸ್ತವವನ್ನು ಮನವರಿಕೆ ಮಾಡಿಕೊಡುತ್ತೇವೆ” ಎಂದು ಹೇಳುವ ಮೂಲಕ ಆದಿಚುಂಚನಗಿರಿ ಪೀಠಾಧ್ಯಕ್ಷರಿಗೆ ಬುದ್ಧಿ ಹೇಳುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.

Advertisements

“ಅವರ ಬಳಿಗೆ ದಾಖಲೆಗಳನ್ನು ತೆಗೆದುಕೊಂಡು ಹೋಗುತ್ತೇವೆ. ಉರಿಗೌಡ, ನಂಜೇಗೌಡ ಬಗ್ಗೆ ದಾಖಲೆ ಸಂಗ್ರಹಿಸುವ ಕೆಲಸ ಮಾಡುತ್ತೇವೆ. ಉರಿಗೌಡ, ನಂಜೇಗೌಡ ಹೆಸರು ನಿನ್ನೆ ಮೊನ್ನೆಯಿಂದ ಪ್ರಾಮುಖ್ಯತೆಗೆ ಬಂದಿರುವುದಲ್ಲ” ಎಂದು ಸೆಡ್ಡು ಹೊಡೆದಿದ್ದಾರೆ.

“ಉರಿಗೌಡ-ನಂಜೇಗೌಡ ಅವರ ಬಗ್ಗೆ ಪುಸ್ತಕಗಳಲ್ಲಿ ಉಲ್ಲೇಖಗಳಿವೆ. ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಎಲ್ಲರೂ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಟಿಪ್ಪು ಸುಲ್ತಾನನನ್ನು ನಮ್ಮ ಇತಿಹಾಸದಲ್ಲಿ ವೈಭವೀಕರಿಸಲಾಗಿದೆ. ಉರಿಗೌಡ-ನಂಜೇಗೌಡರ ವಿಚಾರದಲ್ಲಿ ಅಗೌರವ ತೋರಿಸಿರುವ ಎಚ್‌ ಡಿ ಕುಮಾರಸ್ವಾಮಿ ಅವರು ನಿರ್ಮಲಾನಂದ ಶ್ರೀಗಳ ಬಳಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಟಿಪ್ಪು ಸುಲ್ತಾನ್ ಹತ್ಯೆಯ ಕುರಿತು ಸಂಶೋಧನೆಯ ಮೂಲಕ ಸತ್ಯ ಹೊರಬೀಳಬೇಕು. ಸ್ವಾಮೀಜಿ ನನ್ನ ಜೊತೆ ಮಾತನಾಡಿದ್ದಾರೆ. ಗುರುಗಳ ಮಾತಿಗೆ ನಾವು ಗೌರವ ಕೊಡುತ್ತೇವೆ. ಟಿಪ್ಪು ಮತಾಂಧ ಅನ್ನುವುದು ನಿಜ. ಅವನನ್ನು ವೈಭವಿಕರಿಸಲಾಗಿದೆ. ಇತಿಹಾಸದಲ್ಲಿ ತಿಳಿಸಬೇಕಾದ್ದನ್ನು ತಿಳಿಸಿಲ್ಲ” ಎಂದು ಹೇಳಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X