ಶಿವಮೊಗ್ಗ | ಗೋಮಾಳ ಜಮೀನು ವಿವಾದ; ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

Date:

Advertisements

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರ್ವೆ ನಂ. 105ರಲ್ಲಿರುವ 7.15 ಎಕರೆ ಗೋಮಾಳ ಜಮೀನಿಗೆ ಸಂಬಂಧಪಟ್ಟಂತೆ ಖಾತೆ ಪಹಣಿ ರದ್ದುಪಡಿಸದೆ ಹೋದಲ್ಲಿ ಗ್ರಾಮಸ್ಥರು ಮುಂದಿನ ಎಲ್ಲ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಮೆಳವರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಹಿಂದಿನ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದೇವೆ. ಆದರೆ ಹಾಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗ್ರಾಮಸ್ಥರ ಗೋಮಾಳ ಉಳಿಸಿಕೊಳ್ಳುವ ಹೋರಾಟಕ್ಕೆ ಬೆಂಬಲ ನೀಡದಿರುವುದು ದುರದೃಷ್ಟಕರ ಸಂಗತಿ” ಎಂದರು.

“1963-64 ರಲ್ಲಿ ಮೆಳವರಿಗೆ ಗ್ರಾಮ ನಾರಾಯಣಪ್ಪ ಎಂಬುವವರಿಗೆ ಷರತ್ತಿನ ಮೇಲೆ ಗೇರು ಬೇಸಾಯಕ್ಕೆ ಜಮೀನು ಮಂಜೂರು ಮಾಡಲಾಗಿತ್ತು. ಆದರೆ ಗೇರು ಬೇಸಾಯ ಈತನಕ ಮಾಡಿಲ್ಲ. ಸರ್ಕಾರ ವಿಧಿಸಿದ ಷರತ್ತು ಉಲ್ಲಂಘನೆ ಮಾಡಿರುವುದರಿಂದ ಜಮೀನು ಸರ್ಕಾರಕ್ಕೆ ವಾಪಸ್‌ ಸಲ್ಲಬೇಕು. ಈ ಜಮೀನಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ಜಮೀನನ್ನು ಗ್ರಾಮಸ್ಥರು ನೂರಾರು ವರ್ಷಗಳಿಂದ ರಕ್ಷಣೆ ಮಾಡಿಕೊಂಡು ಬರಲಾಗಿದೆ” ಎಂದರು.

Advertisements

“ಉದ್ದೇಶಿತ ಜಾಗದಲ್ಲಿ ಕಾಡು ಜಾತಿ ಮರ, ಹುಲ್ಲುಗಾವಲು ಇದೆ. ಆದರೆ ಪೊಲೀಸರು ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಜಮೀನಿಗೆ ಸಂಬಂಧಪಟ್ಟ ರೇಣುಕಮ್ಮ ಎಂಬುವವರಿಗೆ ಅನುಕೂಲ ಮಾಡಿಕೊಡಲು ಜೆಸಿಬಿ, ಟ್ರ್ಯಾಕ್ಟರ್ ಬಳಸಿ ಹಸಿರು ನಾಶ ಮಾಡಿ ಜಮೀನು ಸಮತಟ್ಟು ಮಾಡಲಾಗಿದೆ. ಪ್ರತಿಭಟಿಸಿದ ಗ್ರಾಮಸ್ಥರನ್ನು ಪೊಲೀಸರು ಬೆದರಿಸಿದ್ದಾರೆ. ಜೊತೆಗೆ ಕಾಡು ಇರಲಿಲ್ಲವೆಂದು ಸುಳ್ಳು ವರದಿ ನೀಡಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗ್ರಾಮೀಣ ಜನರಿಗೆ ಸೇವಾ ಮನೋಭಾವದಿಂದ ಅಧಿಕಾರಿಗಳು ನೆರವಾಗಬೇಕು: ಸಚಿವ ಪ್ರಿಯಾಂಕ್‌ ಖರ್ಗೆ

“ಗ್ರಾಮಕ್ಕೆ ಸಂಬಂಧಪಟ್ಟ ಜಮೀನು ಗ್ರಾಮಕ್ಕೆ ಉಳಿಯಬೇಕು. ಈ ಹೋರಾಟಕ್ಕೊಂದು ತಾರ್ಕಿಕ ಅಂತ್ಯ ಸಿಗುವವರೆಗೂ ಗ್ರಾಮಸ್ಥರು ಮುಂಬರುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡಿದ್ದೇವೆ. ಜಿಲ್ಲಾಧಿಕಾರಿಯವರು ಕೂಡಲೇ ಮಧ್ಯಪ್ರವೇಶ ಮಾಡಿ ಗ್ರಾಮದ ಜಮೀನು ಗ್ರಾಮಕ್ಕೆ ಉಳಿಸಿಕೊಡಬೇಕು” ಎಂದು ಒತ್ತಾಯಿಸಿದರು.

ನಾರಾಯಣಪ್ಪ, ಗಣಪತಿ, ವೆಂಕಟೇಶ್, ಸೋಮಶೇಖರ್, ಅಣ್ಣಪ್ಪ, ಲೋಕೇಶ್, ರಮೇಶ್, ನಾರಾಯಣಪ್ಪ ಎಚ್ ಎ, ನಾಗರಾಜ, ವೀರಭದ್ರ, ಕೆರೆಯಪ್ಪ, ರಾಜಪ್ಪ ಸೇರಿದಂತೆ ಇತರರು ಇದ್ದರು.

ವರದಿ: ರಫೀಕ್ ಕೊಪ್ಪ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X